ಖಾರ್ಗೋನ್: ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಅಂಗಡಿಯೊಂದರ ಮೇಲೆ ತ್ರಿವರ್ಣ ಧ್ವಜವನ್ನು ಕಟ್ಟುವ ವೇಳೆ ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೋಹನ್ ಪಟೇಲ್ (45) ಎಂಬಾತ, ಕಿರಾಣಿ ಅಂಗಡಿ ಕಟ್ಟಡದ ಮೇಲ್ಬಾಗದಲ್ಲಿದ್ದ ಕಬ್ಬಿಣದ ರಾಡ್ಗೆ ರಾಷ್ಟ್ರಧ್ವಜವನ್ನು ಕಟ್ಟುವಾಗ ವಿದ್ಯುತ್ ತಂತಿಗೆ ತಗುಲಿದೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಆತ ಸಾವಿಗೀಡಾಗಿದ್ದಾರೆ ಎಂದು ಬರ್ವಾಹಾ ಪೊಲೀಸ್ ಠಾಣೆಯ ಪ್ರಭಾರಿ ಪ್ರಕಾಶ್ ವಾಸ್ಕಲೆ ತಿಳಿಸಿದ್ದಾರೆ.
ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.