News Karnataka Kannada
Friday, May 10 2024
ಮಧ್ಯ ಪ್ರದೇಶ

ಮಧ್ಯಪ್ರದೇಶ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ

Mangaluru: Hindu fire brand Yogi b.c. road gets a boost of party workers' enthusiasm
Photo Credit : Twitter

ರೇವಾ: ಮಧ್ಯಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ತೀವ್ರ ಸಂತಾಪ ಸೂಚಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಮಧ್ಯಪ್ರದೇಶದ ರೇವಾದಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ಬಸ್ನಲ್ಲಿದ್ದವರೆಲ್ಲ ಉತ್ತರ ಪ್ರದೇಶದ ನಿವಾಸಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ, ಯೋಗಿ ಆದಿತ್ಯನಾಥ್ ಅವರು, “ಗಾಯಗೊಂಡವರ ಚಿಕಿತ್ಸೆಗಾಗಿ ಮತ್ತು ಮೃತ ಉತ್ತರಪ್ರದೇಶದ ನಿವಾಸಿಗಳ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ಕುರಿತು ಮಧ್ಯಪ್ರದೇಶದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರ ರೂ.2 ಲಕ್ಷ ಪರಿಹಾರ ನೀಡಲಿದ್ದು, ಗಾಯಾಳುಗಳಿಗೆ ರೂ.50 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಮೃತರ ಕುಟುಂಬಕ್ಕೆ ರೂ.1 ಲಕ್ಷ ಹಾಗೂ ಗಾಯಾಳುಗಳಿಗೆ ರೂ.10 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು