ಎಂಬಿಎ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಬಲಿ

ಭೋಪಾಲ್:‌ ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಯುವಕನೊಬ್ಬ ಅಡುಗೆ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಸಂಭವಿಸಿದೆ.

ಮೃತ ಯುವಕನನ್ನು, ರೇವಾ ಮೂಲದ ವಿವೇಕ್ ಸೋನಿ (22) ಎಂದು ಗುರುತಿಸಲಾಗಿದೆ. ಈತ ಭೋಪಾಲ್‌ನ ಟಿಐಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯಾಗಿದ್ದ. ಅಯೋಧ್ಯನಗರ ಪ್ರದೇಶದಲ್ಲಿ ಸ್ನೇಹಿತರೊಂದಿಗೆ ವಾಸಿಸುತ್ತಿದ್ದ. ಸೋಮವಾರ ರಾತ್ರಿ 8 ಗಂಟೆಯ (ಡಿ.25 ರಂದು) ಸುಮಾರಿಗೆ ಫ್ಲಾಟ್‌ನಲ್ಲಿ ಓದಲು ಸಿದ್ದತೆ ನಡೆಸುತ್ತಿದ್ದರು.

ಸ್ನೇಹಿತರೊಂದಿಗೆ ಒಟ್ಟಿಗೆ ಓದುವ ಮೊದಲು ಊಟ ಮಾಡುವ ಎಂದು ಹೇಳಿ ವಿವೇಕ್‌ ಅಡುಗೆ ಮನೆಗೆ ಹೋಗಿದ್ದಾರೆ. ಈ ವೇಳೆ ವಿವೇಕ್‌ ತನಗೆ ಎದೆನೋವು ಆಗುತ್ತಿದೆ ಎಂದು ಸ್ನೇಹಿತರ ಬಳಿ ಹೇಳಿದ್ದಾರೆ. ಆದರೆ ನೋವಿನಲ್ಲೇ ಅಡುಗೆ ಮಾಡಲು ಕಿಚನ್‌ ಗೆ ತೆರಳಿದ್ದಾರೆ. ತರಕಾರಿ ಕತ್ತರಿಸುವ ವೇಳೆ ಎದೆಗೆ ಕೈಯಿಟ್ಟುಕೊಂಡೇ ವಿವೇಕ್‌ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago