ಮಧ್ಯಪ್ರದೇಶ: ಮೇಧಾಪಾಟ್ಕರ್‌ ಸಹಿತ 11 ಮಂದಿಯ ವಿರುದ್ಧ ಎಫ್‌ಐಆರ್

ಮಧ್ಯಪ್ರದೇಶ: ಸಂಗ್ರಹಿತ ನಿಧಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಅಡಿಯಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಮತ್ತು ಇತರ 11 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಅವರು ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು “ರಾಜಕೀಯ ಮತ್ತು ದೇಶ ವಿರೋಧಿ ಕಾರ್ಯಸೂಚಿಗೆ” ತಿರುಗಿಸುವ ಮೂಲಕ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಗ್ರಾಮಸ್ಥರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಖಾಸಗಿ ದೂರಿನ ಮೇರೆಗೆ ಮೇಧಾ ಪಾಟ್ಕರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ದೂರುದಾರರು ಕೆಲವು ದಾಖಲೆಗಳನ್ನು ಒದಗಿಸಿದ್ದಾರೆ ಎಂದು ಬರ್ವಾನಿ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಕುಮಾರ್ ಶುಕ್ಲಾ ಪಿಟಿಐಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಮುಂಬೈನಲ್ಲಿ ನೋಂದಣಿಯಾಗಿರುವ ನರ್ಮದಾ ನವನಿರ್ಮಾಣ ಅಭಿಯಾನ (ಎನ್‌ಎನ್‌ಎ) ಟ್ರಸ್ಟ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನರ್ಮದಾ ಕಣಿವೆಯ ಬುಡಕಟ್ಟು ವಿದ್ಯಾರ್ಥಿಗಳಿಗೆ ವಸತಿ ಶೈಕ್ಷಣಿಕ ಸೌಲಭ್ಯಗಳನ್ನು ನಡೆಸಲು ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಆದರೆ ಮೇಧಾಪಾಟ್ಕರ್‌ ಅವರು ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದು ಅವರಬಳಿ ಸಂಪೂರ್ಣ ಖಾತೆ ಮತ್ತು ವೆಚ್ಚಗಳ ಲೆಕ್ಕಪರಿಶೋಧನೆ ಇದ್ದು, ಈ ಆರೋಪಗಳ ಹಿಂದೆ ರಾಜಕೀಯ ಕಾರಣಗಳಿವೆ ಎಂದು ಹೇಳಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

 

Sneha Gowda

Recent Posts

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

12 mins ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

46 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

57 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

1 hour ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

2 hours ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

2 hours ago