News Karnataka Kannada
Sunday, May 05 2024
ಮಧ್ಯ ಪ್ರದೇಶ

ಮಧ್ಯಪ್ರದೇಶ: ನೂಪುರ್‌ ಬೆಂಬಲಿಸಿದ ವ್ಯಕ್ತಿ ಮೇಲೆ ಹಲ್ಲೆ

Nupur's supporter attacked
Photo Credit : Twitter

ಮಧ್ಯಪ್ರದೇಶ: ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ ವ್ಯಕ್ತಿಯೊಬ್ಬರ ಮೇಲೆ ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ವ್ಯಕ್ತಿ ತೀವ್ರಗಾಯಗೊಂಡಿದ್ದಾರೆ.  ಪ್ರಕರಣ ಸಂಬಂಧ 13 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರವಾದಿ ಮಹಮ್ಮದ್‌ ಕುರಿತು ವಿವಾದಿತ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ನೂಪುರ್‌ ಶರ್ಮಾ ಅವರನ್ನು ಬೆಂಬಲಿಸಿದರೆನ್ನುವ ಕಾರಣಕ್ಕೆ ಆಯುಷ್‌ ಜಾದಮ್‌ (25) ಎನ್ನುವವರ ಮೇಲೆ ದಾಳಿ ನಡೆದಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ರಾಕೇಶ್‌ ಸಾಗರ್‌ ತಿಳಿಸಿದ್ದಾರೆ.

ಘಟನೆ ಖಂಡಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಲಪಂಥೀಯ ಸಂಘಟನೆಗಳ ಮುಖಂಡರು ಎಲ್ಲ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು