ಮೋದಿಯವರು 9 ವರ್ಷಗಳಲ್ಲಿ ಏನು ಹೇಳಿದ್ದಾರೋ ಅದನ್ನೇ ಮಾಡಿದ್ದಾರೆ: ಅಮಿತ್ ಶಾ

ಮಧ್ಯ ಪ್ರದೇಶ:  ಮಧ್ಯಪ್ರದೇಶದದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರ ಭರದಿಂದ ಸಾಗುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ  ರಾಜ್ಯದಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ  ಮಾತನಾಡಿ, ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ ಸರ್ಕಾರ ಪಾಕಿಸ್ತಾನದ ಮನೆಗೆ ನುಗ್ಗಿ ಉಗ್ರರನ್ನು ಕೊಂದಿತು. ಈ ಜನರು ಯಾವಾಗಲೂ ತ್ರಿವರ್ಣ ಧ್ವಜವನ್ನು ಅವಮಾನಿಸುತ್ತಿದ್ದರು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವರ್ಣ ಧ್ವಜಕ್ಕೆ ಕೀರ್ತಿ ತಂದರು. ಡಬಲ್ ಇಂಜಿನ್ ಸರ್ಕಾರ ರಚನೆ ಮಾಡಿದರೆ ಈಗಿರುವ ಸಮ್ಮಾನ್ ನಿಧಿಯ 6 ಸಾವಿರ ರೂ.ಗಳನ್ನು 12 ಸಾವಿರ ರೂ.ಗೆ ಪರಿವರ್ತಿಸುತ್ತೇವೆ ಎಂದರು.

ರಾಹುಲ್ ಗಾಂಧಿ ಅಂದು ಹೇಳಿದ್ದರು, 370ನೇ ವಿಧಿಯನ್ನು ತೆಗೆದುಹಾಕಬೇಡಿ, ಕಾಶ್ಮೀರದಲ್ಲಿ ರಕ್ತದ ನದಿ ಹರಿಯುತ್ತದೆ ಎಂದು ಆದರೆ ಅಂಥಹ ಯಾವುದೇ ಘಟನೆಗಳು ನಡೆದಿಲ್ಲ, ಸೋನಿಯಾ-ಮನಮೋಹನ್ ಸರ್ಕಾರದ ಅವಧಿಯಲ್ಲಿ ಆಲಿಯಾ, ಮಲಿಯಾ, ಜಮಾಲಿಯಾ ಪಾಕಿಸ್ತಾನದಿಂದ ನುಗ್ಗಿ ದಾಳಿ ನಡೆಸುತ್ತಿದ್ದರು ಎಂದು ನೆನೆಪಿಸಿಕೊಂಡರು .

ಮೋದಿಯವರು ಒಂಬತ್ತು ವರ್ಷಗಳಲ್ಲಿ ಏನು ಹೇಳಿದ್ದಾರೋ ಅದನ್ನೇ ಮಾಡಿದ್ದಾರೆ. ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸಲು ನೀವು ಸಹಾಯ ಮಾಡಬೇಕು, ಮುಂದಿನ ದಿನಗಳಲ್ಲಿ 10 ಲಕ್ಷದವರೆಗೆ ಉಚಿತ ಚಿಕಿತ್ಸೆ, 82 ಲಕ್ಷ ತಾಯಂದಿರು ಮತ್ತು ಸಹೋದರಿಯರಿಗೆ ಉಜ್ವಲ ಅನಿಲ ಸಂಪರ್ಕವನ್ನು ನೀಡಲಾಗುತ್ತದೆ ಎಂದರು.

ನವೆಂಬರ್ 17 ರಂದು ಮಧ್ಯಪ್ರದೇಶ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

5 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

5 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

6 hours ago