ಮಹಿಳೆ ಮೇಲೆ ಅತ್ಯಾಚಾರ : ಆರೋಪಿಯ ಮನೆ ಧ್ವಂಸ

ಭೋಪಾಲ್‌: ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡುತ್ತಿದ್ದ ಆರೋಪಿಯ ಮನೆಯನ್ನು ಇದೀಗ ಜೆಸಿಬಿಯಿಂದ ಧ್ವಂಸ ಮಾಡಿದ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ.

ಅಧಿಕಾರಿಗಳು ಇಂದು  ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಮನೆಯನ್ನು ನೆಲಸಮಗೊಳಿಸಿದ್ದಾರೆ. ಆರೋಪಿಯ ಮನೆಯನ್ನು ಜೆಸಿಬಿಯಿಂದ ಕೆಡವುತ್ತಿರುವ ವಿಡಿಯೋ ವೈರಲ್‌ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ.

ಅಯಾನ್ ಪಠಾಣ್ ತನ್ನ ನೆರೆ ಮನೆಯಲ್ಲಿ ವಾಸಿಸುತ್ತಿದ್ದ 23 ವರ್ಷದ ಮಹಿಳೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಒಂದು ತಿಂಗಳ ಕಾಲ ಚಿತ್ರಹಿಂಸೆ ನೀಡಿದ್ದನು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಕೂಲಿ ಕೆಲಸ ಮಾಡುತ್ತಿದ್ದ ಅಯಾನ್ ಮಹಿಳೆಯ ತಾಯಿಯ ಹೆಸರಿನಲ್ಲಿರುವ ಆಸ್ತಿಯ ಮೇಲೆ ಕಣ್ಣಿಟ್ಟಿದ್ದನು. ಆಕೆಯ ಆಸ್ತಿಯನ್ನು ತನಗೆ ನೀಡದ್ದಕ್ಕೆ ಮಹಿಳೆಯನ್ನು ಹೊಡೆದು ಆಕೆಯ ಕಣ್ಣು ಮತ್ತು ಬಾಯಿಗೆ ಮೆಣಸಿನ ಪುಡಿಯನ್ನು ತುಂಬಿದ್ದ. ಅಷ್ಟೇ ಅಲ್ಲದೇ ಹೊರಗಡೆ ಆಕೆಯ ಧ್ವನಿ ಕೇಳದೇ ಇರಲು ಬಾಯಿಗೆ ಅಂಟುಗಳನ್ನು ಹಾಕಿದ್ದನು.

ಅಷ್ಟೇ ಅಲ್ಲದೇ ತನ್ನ ಸಂಬಂಧಿಕರ ನೆರವಿನಿಂದ ಮಹಿಳೆಗೆ ಹಲವು ಬಾರಿ ದೈಹಿಕ ಹಿಂಸೆ ನೀಡಿದ್ದ. ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ದೂರು ದಾಖಲಿಸಿದ ನಂತರ ಅಯಾನ್‌ನನ್ನು ಈಗ ಬಂಧಿಸಲಾಗಿದೆ.

 

Chaitra Kulal

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

8 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

32 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

58 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago