News Karnataka Kannada
Friday, April 19 2024
Cricket
ಮಧ್ಯ ಪ್ರದೇಶ

ಆಘಾತಕಾರಿ ಘಟನೆ: ಬಾಲಕನ ಶವ ನೀಡದ ತಾಯಿಗೆ ಪೊಲೀಸರಿಂದ ಕಪಾಳಮೋಕ್ಷ

Shocking incident: Mother slapped by cops for not giving boy's body
Photo Credit : IANS

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ತನ್ನ ಒಂಬತ್ತು ವರ್ಷದ ಮಗನ ಶವವನ್ನು ಹೊತ್ತೊಯ್ಯುತ್ತಿದ್ದ ತಾಯಿಗೆ ಶುಕ್ರವಾರ ಪೊಲೀಸರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

ಎರಡು ದಿನಗಳ ಹಿಂದೆ ಜಿಲ್ಲೆಯ ಜೈತ್‌ಪುರದ ಹಳ್ಳಿಯಲ್ಲಿ ಒಂಬತ್ತು ವರ್ಷದ ಬಾಲಕನಿಗೆ ಹಾವು ಕಚ್ಚಿತ್ತು. ತಾಯಿ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಬಳಿಕ ಮಗನ ಶವವನ್ನು ಮನೆಗೆ ತೆಗೆದುಕೊಂಡು ಹೊರಟಾಗ ಪೊಲೀಸ್‌ ಹೆಡ್‌ ಕಾನ್‌ ಸ್ಟೆಬಲ್‌ ಸಂತೋಷ್‌ ಸಿಂಗ್‌ ಪರಿಹಾರ್‌ ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನೀಡುವಂತೆ ಗದರಿದ್ದಾನೆ. ಆದರೆ ನೊಂದ ತಾಯಿ ಶವ ನೀಡಲು ನಿರಾಕರಿಸಿದಾಗ ಸಂತೋಷ್‌ ಆಕೆಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ಮೃತ ಬಾಲಕನ ಕುಟುಂಬಸ್ಥರು ಅರೋಪಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಎಸ್‌ ಪಿ ಶಹದೋಲ್‌ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು