ಬಿಟಿಆರ್ ಪ್ರದೇಶದಲ್ಲಿ ಮತ್ತೊಂದು ಹುಲಿ ಸಾವು

ಉಮಾರಿಯಾ: ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಬಾಂಧವ್‍ಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಯೊಂದು ಶವವಾಗಿ ಪತ್ತೆಯಾಗಿದೆ. ಇದನ್ನು ದೊಡ್ಡ ಹುಲಿ ಕೊಂದಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಇದು ಬಿಟಿಆರ್ ಪ್ರದೇಶದಲ್ಲಿ ಒಂದು ವಾರದೊಳಗೆ ಎರಡನೇ ಹುಲಿ ಸಾವಿನ ಪ್ರಕರಣವಾಗಿದೆ.

18 ತಿಂಗಳ ವಯಸ್ಸಿನ ಹುಲಿಯ ಶವ ಬಿಟಿಆರ್‍ನ ಧಮೋಖರ್ ವ್ಯಾಪ್ತಿಯ ಕಂದಕದಲ್ಲಿ ಪತ್ತೆಯಾಗಿದೆ. ಮೃತದೇಹವು ಸುಮಾರು 36 ಗಂಟೆಗಳಷ್ಟು ಹಳೆಯದಾಗಿದೆ ಮತ್ತು ವಯಸ್ಕ ಹುಲಿಯೊಂದಿಗೆ ಕಾದಾಟದಲ್ಲಿ ಹುಲಿ ಸಾವನ್ನಪ್ಪಿರುವ ಶಂಕೆ ಇದೆ . ಸುತ್ತಮುತ್ತಲ ಪ್ರದೇಶದಲ್ಲಿ ಎರಡನೇ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದೆ.

ಮೃತದೇಹದ ಕತ್ತಿನ ಮೂಳೆ ಮುರಿದಿರುವುದು  ಜೊತೆಗೆ  ಹಲ್ಲಿನ ಗುರುತುಗಳು ಕೂಡ ಕಂಡುಬಂದಿದೆ. ಮತ್ತೊಂದು ಹುಲಿಯೊಂದಿಗೆ ಕಾದಾಟದಲ್ಲಿ ಇದು ಮೃತಪಟ್ಟಿರಬಹುದು  ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ.

Ramya Bolantoor

Recent Posts

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

8 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

26 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

42 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

43 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

1 hour ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

1 hour ago