News Karnataka Kannada
Thursday, May 09 2024
ಮಧ್ಯ ಪ್ರದೇಶ

ಉಜ್ಜಯನಿ ಅತ್ಯಾಚಾರ ಪ್ರಕರಣ: ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ

Ujjain rape case: Accused tries to escape from custody
Photo Credit : IANS

ಉಜ್ಜಯನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರ ಎಸಗಿ ನಗರದ ದಂಡಿ ಆಶ್ರಮದ ಬಳಿ ಎಸೆದಿದ್ದರು. ಬಳಿಕ ಆಕೆ ಅಸ್ವಸ್ಥಳಾಗಿ ಸಹಾಯ ಕೇಳುತ್ತಾ ಅಲೆದಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಈ ಮಧ್ಯೆ ಬಾಲಕಿ ಹತ್ತಿದ್ದ ಆಟೋ ರಿಕ್ಷಾ ಚಾಲಕ ಸೇರಿ ಐವರನ್ನ ಪೊಲೀಸರು ಬಂಧಿಸಿದ್ದರು. ಆದರೆ ಆಕೆಯ ಬಟ್ಟೆಯನ್ನು ವಶಪಡಿಸಿಕೊಳ್ಳಲು ತೆರಳಿದ್ದ ವೇಳೆ ಪ್ರಮುಖ ಆರೋಪಿ ಆಟೋ ಚಾಲಕ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಈ ವೇಳೆ ಆತನನ್ನು ಚೇಸ್ ಮಾಡಿ ಬಂಧಿಸಿದ್ದಾರೆ. ಆಟೋ ಚಾಲಕ ಭರತ್ ಸೋನಿ ಅಪರಾಧ ನಡೆಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿ ರಸ್ತೆಯಲ್ಲಿ ಬಿದ್ದಿದ್ದಾನೆ. ಈ ವೇಳೆ ಕಾಲು ಮತ್ತು ಕೈಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇನ್​ಸ್ಪೆಕ್ಟರ್​ ಅಜಯ್ ಕುಮಾರ್ ತಿಳಿಸಿದ್ದಾರೆ.

ಇಂದು ನಾವು ಅಪರಾಧ ನಡೆದ ಸ್ಥಳಕ್ಕೆ ಬಾಲಕಿ ತೊಟ್ಟಿದ್ದ ಬಟ್ಟೆಗಳನ್ನು ರಿಕವರ್​ ಮಾಡಿಕೊಳ್ಳಲು ತೆರಳಿದ್ದೆವು. ಆದರೆ ಈ ವೇಳೆ ಭರತ್​ ನಮ್ಮಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಪೊಲೀಸ್ ಅಧಿಕಾರಿಗಳು ಅವನನ್ನು ಚೇಸ್ ಮಾಡಿ ಹಿಡಿದರು. ಈ ವೇಳೆ ಆತ ಸಿಮೆಂಟ್ ರಸ್ತೆ ಮೇಲೆ ಬಿದ್ದು ಗಾಯಗೊಂಡ ಎಂದು ಕುಮಾರ್ ಮಾಹಿತಿ ನೀಡಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಸತ್ನಾ ಮೂಲದವಳು ಎಂದು ತಿಳಿದುಬಂದಿದ್ದ, ಆಕೆ ಆಟೋ ಮೂಲಕ ಉಜ್ಜಯನಿಗೆ ಬಂದಿದ್ದಳು. ಆಟೋದಲ್ಲೂ ರಕ್ತದ ಕಲೆಗಳು ಪತ್ತೆಯಾಗಿದೆ. ವಾಹನದ ವಿಧಿ ವಿಜ್ಞಾನ ಪರೀಕ್ಷೆ ನಡೆಸಲಾಗುತ್ತಿದೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು