News Karnataka Kannada
Monday, April 29 2024
ಮಹಾರಾಷ್ಟ್ರ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ನಾಟಿ ವೈದ್ಯನಿಗೆ 29 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್​ ಕ್ಲೀನರ್ ಅತ್ಯಾಚಾರ ಎಸಗಿದ ಘಟನೆ ಸಂಭವಿಸಿದೆ.
Photo Credit : IANS

ಗೊಂಡಿಯಾ: ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ 30 ವರ್ಷದ ವ್ಯಕ್ತಿಗೆ 29 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಶಬ್ಬೀರ್ ಅಹ್ಮದ್ ಆಟಿ ಮಂಗಳವಾರ ಆರೋಪಿ ಲಂಕೇಶ್ ಅಲಿಯಾಸ್ ಮುಖೇಶ್‌ಕುಮಾರ್ ವಾಮನರಾವ್ ಮೆಶ್ರಾಮ್‌ನನ್ನು ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ದೋಷಿ ಎಂದು ಘೋಷಿಸಿದ್ದಾರೆ.

ಆರೋಪಿಗೆ 29 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.14 ಲಕ್ಷ ದಂಡ ವಿಧಿಸಲಾಗಿದೆ. ಆರೋಪಿಯು ನಾಟಿ ವೈದ್ಯನಾಗಿದ್ದು, 17 ವರ್ಷದ ಅಪ್ರಾಪ್ತೆಯ ಎದೆಯ ಕಾಯಿಲೆಯನ್ನು ಗುಣಪಡಿಸುವ ನೆಪದಲ್ಲಿ ಮಾರ್ಚ್ 27 ಮತ್ತು ಏಪ್ರಿಲ್ 5, 2019 ರಂದು ಲೈಂಗಿಕವಾಗಿ ಬಳಸಿಕೊಂಡಿದ್ದನು.

ಸಂತ್ರಸ್ತೆಯ ಅಜ್ಜಿ ತನ್ನ ಮೊಮ್ಮಗಳ ಎದೆನೋವು ಗುಣಪಡಿಸಲು ಮೆಶ್ರಾಮ್ ಅವರನ್ನು ಸಂಪರ್ಕಿಸಿದ್ದರು. ನಂತರ ಆರೋಪಿಯು ಬಾಲಕಿಯ ಮನೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ಸಂತ್ರಸ್ತೆಯನ್ನು ಲೈಂಗಿಕವಾಗಿ ಶೋಷಿಸಿದ್ದಾನೆ. ‌‌‌‌‌‌‌‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು