ಇಂದು ಮುಂದುವರೆದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ

ಮುಂಬೈ, ನ.4 : ಸಾರಿಗೆ ಸಂಸ್ಥೆಯನ್ನು ಸರ್ಕಾರದ ಸಾರಿಗೆ ಇಲಾಖೆಯೊಂದಿಗೆ ವಿಲೀನ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ನಡೆಸುತ್ತಿರುವ ಮುಷ್ಕರ ಭಾಗಶಃ ಪ್ರಮಾಣದಲ್ಲಿ ಇಂದು ಕೂಡ ಮುಂದುವರೆದಿದೆ.

ಅಕ್ಟೋಬರ್ 28ರಿಂದ ಆರಂಭವಾದ ಮುಷ್ಕರವನ್ನು ಪ್ರಶ್ನಿಸಿ ಸಾರಿಗೆ ನಿಗಮ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಮುಷ್ಕರ ಕೈ ಬಿಡುವಂತೆ ನೌಕರರ ಸಂಘಟನೆಗಳಿಗೆ ಸೂಚಿಸಿತ್ತು. ಮುಂದಿನ ವಿಚಾರಣೆಯನ್ನು ಮುಂದೂಡಿತ್ತು. ನ್ಯಾಯಾಲಯ ಆದೇಶದ ಹೊರತಾಗಿಯೂ ಕೆಲ ಡಿಪೋಗಳ ನೌಕರರು ಇಂದು ಮುಷ್ಕರ ಮುಂದುವರೆಸಿದ್ದಾರೆ. ಒಟ್ಟು 250 ಡಿಪೋಗಳ ಪೈಕಿ ಇಂದು ಬೆಳಗ್ಗೆ 40 ಡಿಪೋಗಳು ಮುಷ್ಕರ ಮುಂದುವರೆಸಿದ್ದವು. ಈ ಮೊದಲು 59 ಡಿಪೋಗಳು ಮುಷ್ಕರ ನಡೆಸುತ್ತಿದ್ದವು.

ಮುಷ್ಕರಕ್ಕೂ ಮೊದಲು ಸಾರಿಗೆ ಸರ್ಕಾರ ಮತ್ತು ನೌಕರರ ಸಂಘಟನೆಗಳ ಜೊತೆ ನಡೆದ ಸಭೆಯಲ್ಲಿ ಸಾರಿಗೆ ಸಚಿವರು ಬಹಳಷ್ಟು ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದ್ದರು. ನಿಗಮವನ್ನು ಸರ್ಕಾರದೊಂದಿಗೆ ವಿಲೀನ ಮಾಡುವ ಬೇಡಿಕೆಗೆ ಮಾತ್ರ ಸರ್ಕಾರ ಸಮ್ಮತಿಸಿರಲಿಲ್ಲ. ಉಳಿದಂತೆ ಬಹುತೇಕ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿತ್ತು.

ಆದರೆ ನೌಕರರ ಪ್ರಮುಖ ಬೇಡಿಕೆಯೇ ನಿಗಮವನ್ನು ಸರ್ಕಾರದೊಂದಿಗೆ ವಿಲೀನ ಮಾಡಬೇಕು ಎಂಬುದಾಗಿದೆ. ದೇಶದಲ್ಲೇ ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮ ದೊಡ್ಡ ಸಂಸ್ಥೆ ಎಂದು ಗುರುತಿಸಿಕೊಂಡಿದೆ. ಸುಮಾರು 16 ಸಾವಿರ ಬಸ್‍ಗಳಿದ್ದು, 93 ಸಾವಿರ ಚಾಲಕ ಹಾಗೂ ನಿವಾರ್ಹಕರಿದ್ದಾರೆ. ಪ್ರತಿ ದಇನ 65 ಲಕ್ಷ ಪ್ರಯಾಣಿಕರ ನಿಗಮದ ಸೇವೆ ಬಳಕೆ ಮಾಡುತ್ತಿದ್ದಾರೆ.

Gayathri SG

Recent Posts

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

12 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

28 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

36 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

56 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

1 hour ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

2 hours ago