News Karnataka Kannada
Wednesday, May 08 2024
ಮಹಾರಾಷ್ಟ್ರ

ಎಕ್ಸ್ ಇ ಹೊಸ ರೂಪಾಂತರಿ ಪತ್ತೆಯಾಗಿಲ್ಲ; ಆರೋಗ್ಯ ಸಚಿವರ ಸ್ಪಷ್ಟನೆ

Omicrone
Photo Credit :

ಮುಂಬೈ: ಎಕ್ಸ್ ಇ ಎಂಬ ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಹೊಸ ತಳಿ ಪತ್ತೆಯಾಗಿರುವ ಬಗ್ಗೆ ಯಾವುದೇ ದೃಢೀಕರಣವನ್ನು ಸ್ವೀಕರಿಸಿಲ್ಲ.ಹೀಗಾಗಿ ಎಕ್ಸ್ ಇ ಹೊಸತಳಿ ಪತ್ತೆಯಾಗಿರುವುದು ಕಂಡುಬಂದಿಲ್ಲ ಎಂದು ಹೇಳಿದರು.

ಎಕ್ಸ್ ಇ ಪ್ರಭೇದ ಒಮಿಕ್ರಾನ್ ಗಿಂತ 10 ಪಟ್ಟು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಎನ್ ಐ ಬಿ ವರದಿ ಬಂದ ಬಳಿಕ ಹೆಚ್ಚಿನ ವಿವರಣೆ ನೀಡುತ್ತೇನೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವರು ಹೇಳಿದ್ದಾರೆ.

ಮುಂಬೈನಲ್ಲಿ ಎಕ್ಸ್ ಇ ಎಂಬ ಕೊರೊನಾ ಹೊಸ ತಳಿ ಪತ್ತೆಯಾಗಿದೆ ಎಂದು ವರದಿ ಪ್ರಸಾರವಾಗಿತ್ತು. ಈ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಕೂಡ ಸ್ಪಷ್ಟನೆ ನೀಡಿದ್ದು, ಎಕ್ಸ್ ಇ ತಳಿ ಪತ್ತೆಯಾಗಿರುವುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು