ಮಹಾರಾಷ್ಟ್ರ

ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಆಯೋಜಿಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮಹಾರಾಷ್ಟ್ರದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಆಯೋಜಿಸಲು ಸುಪ್ರೀಂ ಕೋರ್ಟ್‌ ಗುರುವಾರ ಅನುಮತಿ ನೀಡಿದೆ. ರಾಜ್ಯದಲ್ಲಿ 2017ರಿಂದ ಈ ಸ್ಪರ್ಧೆಯನ್ನು ನಿಷೇಧಿಸಲಾಗಿದೆ.

ಈ ಕುರಿತು ಬಾಕಿ ಇದ್ದ ಎಲ್ಲ ಅರ್ಜಿಗಳನ್ನು ಸಂವಿಧಾನ ಪೀಠದ ಪರಾಮರ್ಶೆಗೆ ಪೀಠ ಒಪ್ಪಿಸಿತು. ‘ಪ್ರಾಣಿ ಹಿಂಸೆ ತಡೆ ಕಾಯ್ದೆ 1960’ಕ್ಕೆ ತಂದಿರುವ ತಿದ್ದುಪಡಿ ಮತ್ತು ಈ ಸಂಬಂಧ ಮಹಾರಾಷ್ಟ್ರ ಸರ್ಕಾರ ರೂಪಿಸಿರುವ ನಿಯಮಗಳು ವಿಚಾರಣೆ ಬಾಕಿ ಉಳಿದಿರುವ ಅವಧಿಯಲ್ಲಿ ಚಾಲ್ತಿಯಲ್ಲಿರುತ್ತವೆ ಎಂದೂ ಕೋರ್ಟ್ ತಿಳಿಸಿತು.

ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠವು, ‘ಇದೇ ರೀತಿಯ ಸ್ಪರ್ಧೆಗಳು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆಯುತ್ತಿವೆ. ಆ ರಾಜ್ಯಗಳಲ್ಲಿ ಕಾಯ್ದೆಗೆ ತಂದಿರುವ ತಿದ್ದುಪಡಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಯಾವುದೇ ಮಧ್ಯಂತರ ಆದೇಶ ನೀಡಿಲ್ಲ’ ಎಂದು ಉಲ್ಲೇಖಿಸಿತು.

ಆ ಎರಡು ರಾಜ್ಯಗಳಲ್ಲಿ ತಂದಂತೆಯೇ ಮಹಾರಾಷ್ಟ್ರದಲ್ಲಿಯೂ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಹೀಗಾಗಿ, ಅದೇ ಮಾನದಂಡವನ್ನು ಇಲ್ಲೂ ಅಳವಡಿಸಬೇಕು ಎಂದು ಪೀಠ ಅಭಿಪ್ರಾಯಪಟ್ಟಿತು. ನ್ಯಾಯಮೂರ್ತಿಗಳಾದ ದಿನೇಶ್‌ ಮಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್‌ ಅವರು ಈ ಪೀಠದ ಇತರ ಸದಸ್ಯರು.

ಕರ್ನಾಟಕ ಮತ್ತು ತಮಿಳುನಾಡು ಪ್ರಕರಣ ಉಲ್ಲೇಖಿಸಿ ಅರ್ಜಿ ಸಲ್ಲಿಸಿದ್ದ ಮಹಾರಾಷ್ಟ್ರ ಸರ್ಕಾರ, ರಾಜ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆಯ ಮೇಲೆ ವಿಧಿಸಿರುವ ನಿಷೇಧವನ್ನು ಹಿಂಪಡೆಯಬೇಕು ಎಂದು ಕೋರಿತ್ತು.

ಎತ್ತಿನಗಾಡಿ ಓಟದ ಸ್ಪರ್ಧೆಗೆ ಬಾಂಬೆ ಹೈಕೋರ್ಟ್‌2017ರಲ್ಲಿ ನಿಷೇಧ ಹೇರಿದ್ದು, ಹಿಂಪಡೆಯಲು ನಿರಾಕರಿಸಿದೆ. ಇಂತಹದೇ ಸ್ಪರ್ಧೆ ಇರುವ ಕರ್ನಾಟಕ, ತಮಿಳುನಾಡಿನಲ್ಲಿ ನಿರ್ಬಂಧ ಇಲ್ಲ ಎಂದು ಮಹಾರಾಷ್ಟ್ರ ಹೇಳಿತ್ತು.

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಇದರೊಂದಿಗೆ ನಡೆಸಬೇಕು. ಸಂಬಂಧಿತ ವಾದಿಗಳು ಈ ಸಂಬಂಧ ಮುಖ್ಯ ವಿಷಯದ ವಿಚಾರಣೆಗೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅವರಿಗೇ ಮನವಿ ಸಲ್ಲಿಸಬಹುದು ಎಂದು ಪೀಠವು ಸಲಹೆ ಮಾಡಿತು. ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಮಹಾರಾಷ್ಟ್ರ ಸರ್ಕಾರವನ್ನು ಪ್ರತಿನಿಧಿಸಿದ್ದರು.

Sneha Gowda

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

16 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

41 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago