News Karnataka Kannada
Tuesday, April 30 2024
ಮಹಾರಾಷ್ಟ್ರ

ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು: ರಾಜ್ ಠಾಕ್ರೆ

Untitled 1
Photo Credit :

ಮಹಾರಾಷ್ಟ್ರ: ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿ ಮಾಡಬೇಕು ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಆದಷ್ಟು ಬೇಗ ಜಾರಿಗೊಳಸಬೇಕೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್​ಎಸ್​)ಯ ಅಧ್ಯಕ್ಷ ರಾಜ್​ ಠಾಕ್ರೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿನಗರ ಎಂದು ಬದಲಾಯಿಸಬೇಕೆಂದೂ ಆಗ್ರಹಿಸಿದ್ದಾರೆ. ಈ ವೇಳೆ ಧ್ವನಿವರ್ಧಕ ವಿಚಾರವಾಗಿಯೂ ಅವರು ವಾಗ್ದಾಳಿ ಮುಂದುವರೆಸಿದ್ದಾರೆ.

ಮಸೀದಿಗಳ ಧ್ವನಿವರ್ಧಕಗಳಿಗೆ ಪ್ರತಿಯಾಗಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ನುಡಿಸಲು ನಾನು ನಮ್ಮ ಕಾರ್ಯಕರ್ತರಲ್ಲಿ ಕೇಳಿಕೊಂಡಿದ್ದೆ. ನಂತರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ದಂಪತಿ ‘ಮಾತೋಶ್ರೀ’ (ಸಿಎಂ ಉದ್ಧವ್​ ಠಾಕ್ರೆ ನಿವಾಸ)ದ ಮುಂದೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಹೇಳಿದ್ದರು.

ಆದರೆ, ಅವರನ್ನು ಬಂಧಿಸಿದ್ದರು. ಅಲ್ಲದೇ, ಶಿವಸೇನೆ ಕಾರ್ಯುಕರ್ತರು ಮತ್ತು ರಾಣಾ ದಂಪತಿ ನಡುವೆ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾದರೆ, ‘ಮಾತೋಶ್ರೀ’ ಏನು ಮಸೀದಿಯೇ ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು