ಮಹಾರಾಷ್ಟ್ರ

ಐಎನ್‌ಎಸ್‌ ವಾಘ್ಶೀರ್‌ ಜಲಾಂತರ್ಗಾಮಿ ಉದ್ಘಾಟಿಸಿದ ರಕ್ಷಣಾ ಕಾರ್ಯದರ್ಶಿ ಅಜಯ್‌ ಕುಮಾರ್‌

ಪ್ರಾಜೆಕ್ಟ್-‌75 ಅಡಿಯಲ್ಲಿ ದೇಶೀಯವಾಗಿನಿರ್ಮಾಣವಾಗಿರುವ ಐಎನ್‌ಎಸ್‌ ವಾಘ್ಶೀರ್‌ ಜಲಾಂತರ್ಗಾಮಿ ನೌಕೆಯನ್ನು ಇಂದು ಮುಂಬೈನಲ್ಲಿ ಉದ್ಘಾಟಿಸಲಾಯಿತು.

ರಕ್ಷಣಾ ಕಾರ್ಯದರ್ಶಿ ಅಜಯ್‌ ಕುಮಾರ್‌ ಜಲಾಂತಾರ್ಗಾಮಿಯನ್ನು ಉದ್ಘಾಟಿಸಿದರು. ದೇಶೀಯವಾಗಿ ನಿರ್ಮಾಣವಗಿರುವ ಸ್ಕಾರ್ಪಿನ್‌ ದರ್ಜೆಯ 6 ನೇ ಸಬ್‌ ಮರೀನ್‌ ಇದಾಗಿದೆ.

ಈ ಕುರಿತು ಮಾತನಾಡಿದ ರಕ್ಷಣಾ ಕಾರ್ಯದರ್ಶಿ ಅಜಯ್‌ ಕುಮಾರ್‌ “ಭಾರತವು ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುತ್ತಿದೆ ಎಂಬುದಕ್ಕೆ ಐಎನ್‌ಎಸ್‌ ವಾಘ್ಶೀರ್‌ ಉತ್ತಮ ಉದಾಹರಣೆಯಾಗಿದೆ. ಪ್ರಸ್ತುತ ಸಮುದ್ರ ಪ್ರಯೋಗದ ನಂತರ ವಾಘ್ಶೀರ್‌ ನೌಕೆ ಕಾರ್ಯಾರಂಭ ಮಾಡಲಿದೆ” ಎಂದು ಹೇಳಿದರು.

ಪ್ರಾಜೆಕ್ಟ್-75 ರ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟೂ 6 ಸ್ಕಾರ್ಪೀನ್ ದರ್ಜೆಯ ಸಬ್-ಮರೀನ್‌ ಗಳನ್ನು ನಿರ್ಮಾಣ ಮಾಡಲಾಗಿದ್ದು ಸ್ಕಾರ್ಪೀನ್ ವರ್ಗದಲ್ಲಿರುವ ಜಲಾಂತರ್ಗಾಮಿ ನೌಕೆಗಳು ಡೀಸೆಲ್-ಎಲೆಕ್ಟ್ರಿಕ್ ಪ್ರೊಪಲ್ಷನ್ ಸಿಸ್ಟಮ್‌ಗಳಿಂದ ಕಾರ್ಯನಿರ್ವಹಿಸುತ್ತವೆ.

ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಇವು ಮೇಲ್ಮೈ ಹಡಗು ಯುದ್ಧ, ಜಲಾಂತರ್ಗಾಮಿ ಯುದ್ಧ, ಗುಪ್ತಚರ ಸಂಗ್ರಹಣೆ, ಮೈನ್‌ ಲೈಯಿಂಗ್‌, ಸರ್ವೇಲೆನ್ಸ್‌ ಮುಂತಾದ ಹಲವು ಕಾರ್ಯಗಳನ್ನು ನಿರ್ವಹಿಸಬಹುದಾದ ಸಾಮರ್ಥ್ಯವನ್ನು ಹೊಂದಿವೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago