News Karnataka Kannada
Monday, April 29 2024
ಮಹಾರಾಷ್ಟ್ರ

ಓಮಿಕ್ರಾನ್ ಪ್ರಕರಣಗಳ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ

Night Curfew
Photo Credit :

ಮಹಾರಾಷ್ಟ್ರ: ಕೊರೊನಾ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ ಮಾದರಿಯಲ್ಲೇ ಮಹಾರಾಷ್ಟ್ರದಲ್ಲೂ ಹಲವು ನಿರ್ಬಂಧಗಳನ್ನು ಜಾರಿ ಮಾಡಲಾಗಿದೆ.ರಾತ್ರಿ 9 ಗಂಟೆ ನಂತರ ಬೆಳಿಗ್ಗೆ 6 ಗಂಟೆ ವರೆಗೆ 5 ಕ್ಕೂ ಹೆಚ್ಚಿನ ಮಂದಿ ಒಂದೆಡೆ ಸೇರುವುದನ್ನು ನಿರ್ಬಂಧಿಸಲಾಗಿದೆ.ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, 20 ಕ್ಕಿಂತಲೂ ಹೆಚ್ಚಿನ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ.

 ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಡಿ.24 ರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಶನಿವಾರದಿಂದ ಪ್ರತಿ ರಾತ್ರಿ 11 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜತೆಗೆ, ಮದುವೆಗಳು ಮತ್ತು ಸಾಮಾಜಿಕ ಕಾರ್ಯಕ್ರಮಗಳಿಗೆ 200 ಮಂದಿ ಮಾತ್ರ ಹಾಜರಾಗಲು ಅನುಮತಿ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು