ಮುಂಬೈ, ;ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ನಂತರ ಆಕೆಯನ್ನು ಚಲಿಸುತ್ತಿದ್ದ ರೈಲಿನಿಂದ ಕೆಳಗೆ ತಳ್ಳಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಇಲ್ಲಿನ ನವಿ ಮುಂಬೈನ ವಶಿ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ರೈಲು ನಿಲ್ಧಾಣದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ 25 ವರ್ಷದ ಮಹಿಳೆಯನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಥಾಣೆ ಮೂಲದ ಮಹಿಳೆ ಮುಂಬೈನ ಪೋವೈನಲ್ಲಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದರು.ಕಳೆದ ಭಾನುವಾರ ಮನೆಗೆ ಹೋಗಿ ಬಂದ ಮಹಿಳೆ ನಂತರ ಅವರ ಕುಟುಂಬ ವರ್ಗದವರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅದಾದ ನಂತರ ಆಕೆ ವಶಿ ನಿಲ್ದಾಣದ ಸಮೀಪ ಪ್ರಜ್ಞೆ ತಪ್ಪಿ ಬಿದ್ದ ಪರಿಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೈಕ್ ಸವಾರನೊಬ್ಬ ಮಹಿಳೆ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರಿಂದ ಆಕೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರ , ಕೊಲೆ ಯತ್ನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.