ಥಾಣೆ : ಥಾಣೆಯ ವಸತಿ ಕಟ್ಟಡದಲ್ಲಿ ಭಾನುವಾರ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಉಸಿರುಗಟ್ಟಿದ ಕಾರಣ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಪ್ರಕಾರ, ಥಾಣೆಯ ನೌಪಾದ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಈ ದುರ್ಘಟನೆ ನಡೆದಿದೆ ಎಂದರು.
ಇನ್ನೂ, ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ ಇಬ್ಬರು ಕಾರ್ಮಿಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊರ ತೆಗೆದಿದ್ದು, ಮೃತದೇಹಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಇದು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ಥಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.