ದೇಶದಲ್ಲಿ ಓಮೈಕ್ರಾನ್‌ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ

ಮುಂಬೈ (ಪಿಟಿಐ) : ದೆಹಲಿಯ ವ್ಯಕ್ತಿಯೊಬ್ಬರಿಗೆ ಕೊರೊನಾ ರೂಪಾಂತರಿ ತಳಿ ‘ಓಮೈಕ್ರಾನ್‌’ ಸೋಂಕು ತಗುಲಿರುವುದು ದೃಢವಾಗಿದೆ. ಇದರಿಂದಾಗಿ, ದೇಶದಲ್ಲಿ ಓಮೈಕ್ರಾನ್‌ ಸೋಂಕಿತರ ಸಂಖ್ಯೆ 33ಕ್ಕೆ ಏರಿದೆ. ಮಹಾರಾಷ್ಟ್ರದಲ್ಲಿ ಮೂರು ವರ್ಷದ ಮಗು ಸೇರಿ ಏಳು ಮಂದಿಗೆ ಶುಕ್ರವಾರ ಓಮೈಕ್ರಾನ್‌ ಸೋಂಕು ದೃಢಪಟ್ಟಿತ್ತು.

ಮಹಾರಾಷ್ಟ್ರದಿಂದ ವರದಿ ಆಗಿರುವ ಏಳು ಪ್ರಕರಣಗಳಲ್ಲಿ ಮೂರು ಪ್ರಕರಣಗಳು ಮುಂಬೈನಲ್ಲಿ ಪತ್ತೆ ಆಗಿವೆ ಮತ್ತು ನಾಲ್ಕು ಪ್ರಕರಣಗಳು ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್‌ ಪ್ರದೇಶದಲ್ಲಿ ಪತ್ತೆ ಆಗಿವೆ. ಮುಂಬೈನ ಮೂವರು ಸೋಂಕಿತರು ತಾಂಜಾನಿಯಾ, ಬ್ರಿಟನ್‌ ಮತ್ತು ದಕ್ಷಿಣ ಆಫ್ರಿಕದಿಂದ ಇತ್ತೀಚೆಗೆ ಮರಳಿದ್ದರು.

ಓಮೈಕ್ರಾನ್‌ ಸೋಂಕಿತ ದೆಹಲಿಯ 35 ವರ್ಷ ವಯಸ್ಸಿನ ವ್ಯಕ್ತಿ ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ್ದರು.

Gayathri SG

Recent Posts

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

12 mins ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

25 mins ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

41 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

45 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

56 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

1 hour ago