News Karnataka Kannada
Thursday, May 09 2024
ಮಹಾರಾಷ್ಟ್ರ

ಪುಣೆ ʻಮೆಟ್ರೋ ರೈಲು ಯೋಜನೆʼಗೆ ಇಂದು ಪ್ರಧಾನಿ ಮೋದಿ ಚಾಲನೆ

Narendra Modi
Photo Credit :

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ನಗರ ಚಲನಶೀಲತೆಗಾಗಿ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ಒದಗಿಸುವ ಪ್ರಯತ್ನದಲ್ಲಿ  ಪುಣೆ ಮೆಟ್ರೋ ರೈಲು ಯೋಜನೆಗೆ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ಇಂದು ಪುಣೆಗೆ ಆಗಮಿಸಲಿದ್ದು, ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಪುಣೆ ಮಹಾನಗರ ಪಾಲಿಕೆ ಆವರಣದಲ್ಲಿ ʻಛತ್ರಪತಿ ಶಿವಾಜಿ ಮಹಾರಾಜʼರ ಪ್ರತಿಮೆಯನ್ನು ಪ್ರಧಾನಿ ಅನಾವರಣಗೊಳಿಸಲಿದ್ದಾರೆ. ಪ್ರತಿಮೆಯು 1,850 ಕೆಜಿ ಗನ್‌ಮೆಟಲ್‌ನಿಂದ ಮಾಡಲ್ಪಟ್ಟಿದೆ ಮತ್ತು ಸುಮಾರು 9.5 ಅಡಿ ಎತ್ತರವಿದೆ.

ಪ್ರಧಾನ ಮಂತ್ರಿ ಕಾರ್ಯಾಲಯದ ಪ್ರಕಾರ, ಪುಣೆ ಮೆಟ್ರೋ ರೈಲು ಯೋಜನೆ ಯೋಜನೆಯನ್ನು ಒಟ್ಟು 11,400 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಡಿಸೆಂಬರ್ 24, 2016 ರಂದು ಪ್ರಧಾನ ಮಂತ್ರಿಯವರು ಯೋಜನೆಯ ಶಂಕುಸ್ಥಾಪನೆ ನೆರವೇರಿಸಿದ್ದರು. ಅವರು ಇಂದು ಒಟ್ಟು 32.2 ಕಿ.ಮೀ ಯೋಜನೆಯ 12 ಕಿ.ಮೀ ವ್ಯಾಪ್ತಿಯನ್ನು ಉದ್ಘಾಟಿಸಲಿದ್ದಾರೆ. ಅವರು ಗಾರ್‌ವೇರ್ ಮೆಟ್ರೋ ನಿಲ್ದಾಣದಲ್ಲಿ ಪ್ರದರ್ಶನವನ್ನು ಉದ್ಘಾಟಿಸಿ ಪರಿಶೀಲಿಸಲಿದ್ದಾರೆ ಮತ್ತು ಅಲ್ಲಿಂದ ಆನಂದನಗರ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸವಾರಿ ಕೈಗೊಳ್ಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು