ಮಹಾರಾಷ್ಟ್ರ

ಬಾಲಿವುಡ್ ನಟಿ ಮಲೈಕಾ ಅರೋರಾ ಕಾರು ಅಪಘಾತ

ಮುಂಬೈ:  ಪುಣೆಯಲ್ಲಿ ನಡೆದ ಫ್ಯಾಷನ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಹೆಸರಾಂತ ಬಾಲಿವುಡ್ ನಟಿ ಮಲೈಕಾ ಅರೋರಾ  ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟಿಯ ಹಣೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ನವಿ ಮುಂಬೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.’ನಟಿ ಮಲೈಕಾ ಅವರ ಹಣೆಯ ಮೇಲೆ ಸಣ್ಣ ಗಾಯಗಳಾಗಿವೆ. ಸಿಟಿ ಸ್ಕ್ಯಾನ್ ನಡೆಸಲಾಗಿದ್ದು, ಪ್ರಸ್ತುತ ಅವರು ಆರೋಗ್ಯವಾಗಿದ್ದಾರೆ.

ಅವರನ್ನು ರಾತ್ರಿ ನಿಗಾದಲ್ಲಿ ಇರಿಸಲಾಗುತ್ತದೆ ಮತ್ತು ರವಿವಾರ ಬೆಳಿಗ್ಗೆ ಡಿಸ್ಚಾರ್ಜ್ ಮಾಡಲಾಗುತ್ತದೆ’ ಎಂದು ಅಪೋಲೋ ಆಸ್ಪತ್ರೆ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.’ಮಲೈಕಾ ಆಸ್ಪತ್ರೆಯಲ್ಲಿದ್ದಾರೆ. ಆರೋಗ್ಯ ಸ್ಥಿರವಾಗಿದ್ದಾರೆ’ ಎಂದು ಸಹೋದರಿ ಅಮೃತಾ ಅರೋರಾ ತಿಳಿಸಿದ್ದಾರೆ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ನಟಿ ಮಲೈಕಾ ಅರೋರಾ ಕಾರು ಅಪಘಾತ ನಡೆದಿದೆ. ಮಲೈಕಾ ಅರೋರಾ ಅವರು ಡ್ರೈವರ್ ಮತ್ತು ಅಂಗರಕ್ಷಕನ ಜೊತೆ ಪ್ರಯಾಣಿಸುತ್ತಿದ್ದರು ಎಂದು ವರದಿ ತಿಳಿಸಿದೆ.

Swathi MG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago