ಮಹಾರಾಷ್ಟ್ರ

ಮದ್ಯದ ಮೇಲಿನ ತೆರಿಗೆ ಕಡಿತಗೊಳಿಸುವುದಾಗಿ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ : ಮಹಾರಾಷ್ಟ್ರ ಸರ್ಕಾರ ಮದ್ಯದ ಮೇಲಿನ ತೆರಿಗೆಯನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ. ಉದ್ಧವ್ ಠಾಕ್ರೆ ಸರ್ಕಾರವು ಮದ್ಯದ ಮೇಲಿನ ವಿಶೇಷ ತೆರಿಗೆಯನ್ನು ಶೇಕಡಾ 300 ರಿಂದ 150 ಕ್ಕೆ ಇಳಿಸಿದೆ.

ಗಗನಕ್ಕೇರುತ್ತಿರುವ ಇಂಧನ ಬೆಲೆಗಳ ನಡುವೆ, ಸರ್ಕಾರವು ಮದ್ಯ ಸೇವಿಸುವವರಿಗೆ ವ್ಯಾಟ್ ದರವನ್ನು ಕಡಿತಗೊಳಿಸಿದೆ. ಜನರ ಅಸಮಾಧಾನವನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ ಈಗ ಬೇರೆ ರಾಜ್ಯಗಳಿಂದ ಅಕ್ರಮ ಮದ್ಯ ಸಾಗಾಟ ತಡೆಯಲು ಈ ಕ್ರಮ ಕೈಗೊಂಡಿರುವುದಾಗಿ ಹೇಳಿದೆ. ಮಹಾರಾಷ್ಟ್ರ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲೆ ಕೂಡ ಸರ್ಕಾರವನ್ನು ಬೆಂಬಲಿಸಿದ್ದು, ಮಹಾರಾಷ್ಟ್ರದಲ್ಲಿ ಮದ್ಯದ ಮೇಲೆ ಹೆಚ್ಚಿನ ವ್ಯಾಟ್ ಇರುವುದರಿಂದ ಇತರ ರಾಜ್ಯಗಳಿಂದ ಮದ್ಯದ ಕಳ್ಳಸಾಗಣೆ ಹೆಚ್ಚಾಗಿದೆ ಎಂದು ಹೇಳಿದರು. ಇದನ್ನು ನಿಯಂತ್ರಿಸಲು ರಾಜ್ಯದಲ್ಲಿ ಮದ್ಯದ ಮೇಲಿನ ವ್ಯಾಟ್ ಅನ್ನು ಬೇರೆ ರಾಜ್ಯಗಳ ಮಟ್ಟದಲ್ಲಿ ತರಲಾಗಿದೆ.

ಇದೇ ವೇಳೆ ಬಿಜೆಪಿ ಈ ವಿಚಾರದಲ್ಲಿ ಸರ್ಕಾರದ ಉದ್ದೇಶವನ್ನು ಪ್ರಶ್ನಿಸಿದೆ. ಲಾಕ್‌ಡೌನ್‌ನಲ್ಲಿ ಜನರಿಗೆ ವಿನಾಯಿತಿ ನೀಡುವ ವಿಷಯ ಬಂದಾಗ, ಸರ್ಕಾರವು ಮೊದಲು ಮದ್ಯದ ಅಂಗಡಿಗಳನ್ನು ತೆರೆಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ ದಾದಾ ಪಾಟೀಲ್ ಕೇಳಿದರು. ಇದೇ ವೇಳೆ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಇಳಿಸುವ ಬದಲು ಮದ್ಯದ ಮೇಲಿನ ತೆರಿಗೆ ಇಳಿಸುವುದಾಗಿ ಘೋಷಿಸಿದೆ. ಇದು ಸರ್ಕಾರದ ಯಾವ ಜನಸ್ನೇಹಿ ನೀತಿ? ಎಂದು ಕೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್‌ಗೆ ಲೀಟರ್‌ಗೆ ರೂ 29.25 ಮತ್ತು ಡೀಸೆಲ್‌ಗೆ ರೂ 20.78 ವ್ಯಾಟ್ ವಿಧಿಸುತ್ತದೆ , ಈ ಕಾರಣದಿಂದಾಗಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ 110 ತಲುಪಿದೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ರೂ 95 ರಷ್ಟಿದೆ.

Gayathri SG

Recent Posts

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

8 mins ago

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

20 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

23 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

31 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

34 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

42 mins ago