ಥಾಣೆ:ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಕಾಮುಕನೊಬ್ಬ 17 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಕುಲಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 28 ವರ್ಷದ ಯುವಕನೊಬ್ಬ ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಮುಕನ ವರ್ತನೆಯಿಂದ ಅಸ್ವಸ್ಥಳಾಗಿದ್ದ ಯುವತಿ ತನ್ನ ತಾಯಿ ಮನೆಗೆ ಬಂದಾಗ ವಿಷಯ ತಿಳಿಸಿದ್ದಾರೆ. ತಕ್ಷಣ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಕ್ಕದ ಮನೆಯವನಾದ ಕಾಮುಕ ಯುವತಿ ಮನೆಯಲ್ಲಿ ಒಂಟಿಯಾಗಿದ್ದಾಗ ಏಕಾಏಕಿ ಮನೆಗೆ ನುಗ್ಗಿ ಚಿಲಕ ಹಾಕಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರಕ್ಕೆ ಸಹಕರಿಸದ ಯುವತಿ ಮೇಲೆ ಹಲ್ಲೆ ನಡೆಸಿರುವ ಕಾಮುಕ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವ ಬೆದರಿಕೆ ಹಾಕಿ ಅತ್ಯಾಚಾರ ನಡೆಸಿ ಪರಾರಿಯಾಗಿದ್ದ.