News Karnataka Kannada
Sunday, April 28 2024
ಮಹಾರಾಷ್ಟ್ರ

ಮಹಾರಾಷ್ಟ್ರದಲ್ಲಿ ಇಂದು 46,406 ಮಂದಿಗೆ ಕೊರೋನಾ ಸೋಂಕು ದೃಢ

Corona
Photo Credit :

ಮುಂಬೈ : ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಸ್ವಲ್ಪ ಕಡಿಮೆಯಾಗಿದ್ದು, ಗುರುವಾರ 46,406 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದು ನಿನ್ನೆಗಿಂತ 317 ಕಡಿಮೆ ಪ್ರಕರಣಗಳು ದಾಖಲಾಗಿವೆ.

ಇಂದು ಮುಂಬೈನಲ್ಲಿ 13,702 ಸೇರಿದಂತೆ 46,406 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, 36 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 70,81,067 ಕ್ಕೆ ಏರಿದರೆ, ಸಾವಿನ ಸಂಖ್ಯೆ 1,41,737ಕ್ಕೆ ಏರಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಇಂದು ಯಾವುದೇ ಹೊಸ ಓಮಿಕ್ರಾನ್ ಪ್ರಕರಣಗಳು ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.

ಮಹಾರಾಷ್ಟ್ರದಲ್ಲಿ ಬುಧವಾರ 46,723 ಪಾಸಿಟಿವ್ ಪ್ರಕರಣಗಳು ಮತ್ತು 32 ಸಾವುಗಳು ವರದಿಯಾಗಿದ್ದವು. ಕಳೆದ 24 ಗಂಟೆಗಳಲ್ಲಿ 34,658 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಚೇತರಿಸಿಕೊಂಡ ಪ್ರಕರಣಗಳ ಸಂಖ್ಯೆ 66,83,769 ಕ್ಕೆ ಏರಿಕೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು