ನವದೆಹಲಿ: ಮಹಾರಾಷ್ಟ್ರದಲ್ಲಿ ಭಾನುವಾರ ಓಮಿಕ್ರಾನ್ ಕೋವಿಡ್-19 ರೂಪಾಂತರಿ ಸೋಂಕು ಹರಡಿರುವ 6 ಹೊಸ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 151 ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ 6 ಪ್ರಕರಣಗಳು ವರದಿಯಾಗುವ ಮೂಲಕ ಆ ರಾಜ್ಯದಲ್ಲಿನ ಓಮಿಕ್ರಾನ್ ಸೋಂಕಿತರ ಸಂಖ್ಯೆ 54 ಕ್ಕೆ ಏರಿಕೆಯಾಗಿದೆ.
ಹೊಸದಾಗಿ ಸೋಂಕು ತಗುಲಿಸಿಕೊಂಡಿರುವ 6 ಮಂದಿಯ ಪೈಕಿ 5 ಮಂದಿ ಪೂರ್ಣ ಪ್ರಮಾಣದ ಲಸಿಕೆ ಪಡೆದಿದ್ದಾರೆ. 54 ಪ್ರಕರಣಗಳ ಪೈಕಿ 22 ಪ್ರಕರಣಗಳು ಮುಂಬೈ ನಲ್ಲಿ ಪತ್ತೆಯಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಓಮಿಕ್ರಾನ್ ಪ್ರಕರಣಗಳು 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ- ಮಹಾರಾಷ್ಟ್ರ (54) ದೆಹಲಿ (22) ರಾಜಸ್ಥಾನ (17) ಕರ್ನಾಟಕ (14) ತೆಲಂಗಾಣ (20) ಗುಜರಾತ್ (9) ಕೇರಳ (11) ಆಂಧ್ರಪ್ರದೇಶ (1) ಚಂಡೀಗಢ (1) ತಮಿಳುನಾಡು (1) ಪಶ್ಚಿಮ ಬಂಗಾಳ (1) ಪ್ರಕರಣಗಳು ವರದಿಯಾಗಿವೆ.ಈ ನಡುವೆ ಬ್ರಿಟನ್ ನಿಂದ ಇತ್ತೀಚೆಗೆ ಗುಜರಾತ್ಗೆ ಆಗಮಿಸಿದ 45 ವರ್ಷದ ಎನ್ಆರ್ಐ ಮತ್ತು ಹದಿಹರೆಯದ ಹುಡುಗನಿಗೆ ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪಾಸಿಟಿವ್ ದೃಢಪಟ್ಟಿದೆ.