ಮುಂಬೈ : ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹಠಾತ್ ಏರಿಕೆ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ಶಾಲೆಗಳು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲ್ಪಟ್ಟಿವೆ ಎಂದು ಮುಂಬೈ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಚಹಲ್ ಘೋಷಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಬಿಎಂಸಿ ಕಚೇರಿ, ಮಹಾರಾಷ್ಟ್ರ ಕೊರೊನಾ ಪ್ರಕರಣಗಳು ಏರಿಕೆ ಹಿನ್ನೆಲೆಯಲ್ಲಿ ಜನವರಿ 31ರವರೆಗೆ ಶಾಲೆಗಳು ಮುಚ್ಚಲ್ಪಡುತ್ತವೆ ಎಂದು ಸ್ಪಷ್ಟಪಡಿಸಿದೆ. ಏತನ್ಮಧ್ಯೆ, 10 ಮತ್ತು 12ನೇ ತರಗತಿಗಳ ವಿದ್ಯಾರ್ಥಿಗಳಿಗೆ ತರಗತಿಗಳು ಮುಂದುವರಿಯುತ್ತವೆ. ಖಾಸಗಿ ಶಾಲೆಗಳ ಬಗ್ಗೆ ಹೇಳುವುದಾದ್ರೆ, ಅನೇಕ ಶಾಲೆಗಳು ಮುಚ್ಚುತ್ತಿವೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದಿದೆ.