News Karnataka Kannada
Thursday, May 02 2024
ಮಹಾರಾಷ್ಟ್ರ

ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಏರಿಕೆ: ಫೆ.15ರವರೆಗೂ ಶಾಲಾ-ಕಾಲೇಜು ಬಂದ್

Covid Corona
Photo Credit :

ಮುಂಬೈ: ಮಹಾರಾಷ್ಟ್ರದಲ್ಲಿ ಜ.10ರವರೆಗೆ ರಾತ್ರಿ 11 ಗಂಟೆಯಿಂದ ಮುಂಜಾನೆ 5ಗಂಟೆವರೆಗೆ ರಾತ್ರಿ ಕರ್ಫ್ಯೂವನ್ನು ವಿಧಿಸಲಾಗಿದೆ. ಕೋವಿಡ್ ಹರಡುವಿಕೆಯನ್ನು ತಡೆಯಲು ಉದ್ಧವ್ ಠಾಕ್ರೆ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಘೋಷಿಸಿದ್ದು, ಇದರ ಅಡಿಯಲ್ಲಿ ದೊಡ್ಡ ಕೂಟಗಳನ್ನು ನಿರ್ಬಂಧಿಸಲಾಗಿದೆ, ಬ್ಯೂಟಿ ಸಲೂನ್‌ಗಳು, ಕ್ರೀಡಾ ಸಂಕೀರ್ಣಗಳು, ಈಜುಕೊಳಗಳು, ಜಿಮ್‌ಗಳು, ಸ್ಪಾಗಳು ಮತ್ತು ವೆಲ್‌ನೆಸ್ ಕೇಂದ್ರಗಳನ್ನು ಮುಚ್ಚಲಾಗಿದೆ.

  ಅಲ್ಲದೆ, ಫೆ. 15ರವರೆಗೆ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಹೊಸ ನಿಯಮಗಳನ್ವಯ, ಚಿತ್ರಮಂದಿಗಳು ಶೇ 50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬೇಕು ಮತ್ತು ರಾತ್ರಿ 10 ಗಂಟೆಯಿಂದ ಬೆಳಗ್ಗೆ 8ರವರೆಗೆ ಮುಚ್ಚಬೇಕು.ಹೊಸ ಆದೇಶದ ಪ್ರಕಾರ, ಮಹಾರಾಷ್ಟ್ರದಲ್ಲಿ ಮನರಂಜನಾ ಉದ್ಯಾನಗಳು, ಮೃಗಾಲಯಗಳು, ವಸ್ತುಸಂಗ್ರಹಾಲಯಗಳು, ಕೋಟೆಗಳು ಮತ್ತು ಇತರ ಟಿಕೆಟ್ ನೀಡುವ ಸ್ಥಳಗಳನ್ನು ಸಾರ್ವಜನಿಕರಿಗೆ ಮುಚ್ಚಲಾಗುತ್ತದೆ.

ಶಾಪಿಂಗ್ ಮಾಲ್ಸ್, ಮಾರ್ಕೆಟ್ ಸಂಕೀರ್ಣಗಳು ಕೂಡ ಶೇ 50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬೇಕು ಮತ್ತು ರಾತ್ರಿ 10ಗಂಟೆಯಿಂದ ಬೆಳಗ್ಗೆ 8ರವರೆಗೆ ಮುಚ್ಚಿರಬೇಕೆಂದು ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಈವರೆಗೂ ಒಮೈಕ್ರಾನ್ ಪ್ರಕರಣಗಳ ಸಂಖ್ಯೆ 1,009ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 41,434 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 9,671 ಜನರು ಗುಣಮುಖರಾಗಿದ್ದಾರೆ ಮತ್ತು 13 ಜನರು ಸಾವಿಗೀಡಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,73,238 ಸಕ್ರಿಯ ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು