News Karnataka Kannada
Wednesday, May 01 2024
ಮಹಾರಾಷ್ಟ್ರ

ಮಹಾರಾಷ್ಟ್ರದಲ್ಲಿ ಮತ್ತೆ 7 ಜನರಿಗೆ ಓಮೈಕ್ರಾನ್

Airport
Photo Credit :
ಮುಂಬೈ: ಮಹಾರಾಷ್ಟ್ರದಲ್ಲಿ ಭಾನುವಾರ ಕೊರೊನಾ ವೈರಸ್‌ನ ರೂಪಾಂತರ ತಳಿ ‘ಓಮೈಕ್ರಾನ್’ 7 ಹೊಸ ಪ್ರಕರಣಗಳು ದೃಢಪಟ್ಟವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಇದರೊಂದಿಗೆ ಮಹಾರಾಷ್ಟ್ರದಲ್ಲಿ ಓಮೈಕ್ರಾನ್‌ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇದುವರೆಗೆ 12 ಪ್ರಕರಣಗಳು ದಾಖಲಾಗಿವೆ. ರಾಜಧಾನಿ ದೆಹಲಿಯಲ್ಲಿ ಇಂದು ಮೊದಲ ಪ್ರಕರಣ ದೃಢಪಟ್ಟಿದೆ. ತಾಂಜಾನಿಯಾದಿಂದ ದೆಹಲಿಗೆ ಬಂದಿದ್ದ 37 ವರ್ಷ ವ್ಯಕ್ತಿಗೆ ಸೋಂಕು ತಗುಲಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಇದಕ್ಕೂ ಮುನ್ನ ಕರ್ನಾಟಕದಲ್ಲಿ 2, ಗುಜರಾತಿನಲ್ಲಿ 1 ಪ್ರಕರಣ ದಾಖಲಾಗಿತ್ತು.

ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿರುವ ಬ್ರಿಟನ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬೋಟ್ಸ್‌ವಾನ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ, ಸಿಂಗಪುರ, ಹಾಂಗ್‌ಕಾಂಗ್ ಹಾಗೂ ಇಸ್ರೇಲ್ ಅನ್ನು ‘ಅಪಾಯದಲ್ಲಿರುವ’ ದೇಶಗಳು ಎಂದು ಪರಿಗಣಿಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು