ಮಹಾರಾಷ್ಟ್ರದಲ್ಲಿ ಮಳೆಗೆ 40 ಕ್ಕೂ ಹೆಚ್ಚು ಜನರ ಸಾವು

ಮುಂಬೈ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಪ್ರವಾಹದ ಸ್ಥಿತಿ ಏರ್ಪಟ್ಟಿದ್ದು, ಅಲ್ಲಲ್ಲಿ ಭೂಕುಸಿತದ ವರದಿಗಳಾಗಿವೆ. ರಾಯಗಢ ಜಿಲ್ಲೆಯೊಂದರಲ್ಲೇ ಭೂಕುಸಿತ ಮತ್ತು ಪ್ರವಾಹಕ್ಕೆ ಕನಿಷ್ಠ 36 ಮಂದಿ ಮೃತರಾಗಿದ್ದು ರಾಜ್ಯದಲ್ಲಿ 40 ಕ್ಕೂ ಹೆಚ್ಚು ಜನರು ಮಳೆಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಯಗಢ ಜಿಲ್ಲೆಯ ತಾಲಾಯ್‌ನಲ್ಲಿ 32, ಸಖರ್‌ ಸುತರ್‌ವಾಡಿಯಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಕನಿಷ್ಠ 30 ಮಂದಿ ಭೂಕುಸಿತ, ಪ್ರವಾಹದ ವಿಕೋಪಕ್ಕೆ ಸಿಲುಕಿ ಪ್ರಾಣಾಪಾಯದಲ್ಲಿ ಇದ್ದಾರೆ ಎಂದು ಕಲೆಕ್ಟರ್‌ ತಿಳಿಸಿದ್ದಾರೆ.

ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮುಂಬೈನಿಂದ 160 ಕಿ.ಮೀ ದೂರದಲ್ಲಿರುವ ಈ ಗ್ರಾಮಕ್ಕೆ ಎನ್‍ಡಿಆರ್‍ಎಫ್ ಮತ್ತು ರಕ್ಷಣಾ ಪಡೆಗಳು ಧಾವಿಸಿವೆ. ಶುಕ್ರವಾರ ಬೆಳಗ್ಗೆಯಿಂದ ರತ್ನಗಿರಿ ಜಿಲ್ಲೆಯ ಚಿಪ್ಲುನ್‌ ಎಂಬ ಪ್ರದೇಶದಲ್ಲಿ ಸುಮಾರು 5-6 ಸಾವಿರ ಮಂದಿ ತೊಂದರೆಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ‘ಪ್ರಾಥಮಿಕ ವರದಿ ಅನುಸಾರ ರಾಯಗಢದಲ್ಲಿ 30-35 ಮಂದಿ ಮೃತ ಪಟ್ಟಿದ್ದಾರೆ. ರಕ್ಷಣಾ ಕಾರ್ಯ ಬರದಿಂದ ಸಾಗಿದೆ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಠಾಕ್ರೆ ತಿಳಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಮಳೆಯಿಂದಾಗಿ 40 ರಿಂದ 45 ಮಂದಿ ಮೃತಪಟ್ಟಿದ್ದಾರೆ ಎಂದು ಪರಿಹಾರ ಹಾಗೂ ಪುನರ್ವಸತಿ ಸಚಿವ ವಿಜಯ್‌ ವಾಡೆತ್ತಿವರ್‌ ಹೇಳಿದ್ದಾರೆ.ಕರ್ನಾಟಕದ ಆಲಮಟ್ಟಿ ಜಲಾಶಯದಿಂದ ನೀರು ಬಿಡಲಾಗುತ್ತಿದ್ದು, ಇದರಿಂದ ಕೊಲ್ಹಾಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ತಂದೊಡ್ಡಿದೆ ಎಂದು ವಿಜಯ್‌ ವಾಡೆತ್ತಿಕರ್‌ ತಿಳಿಸಿದ್ದಾರೆ. ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. 2005 ಮತ್ತು 1967ರಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಈ ಬಾರಿ ಸಂಭವಿಸಿದೆ ಎನ್ನಲಾಗುತ್ತಿದೆ. ಕೊಲ್ಹಾಪುರದ ಪಂಚ್‌ಗಂಗಾ, ಸಾಂಗ್ಲಿಯ ಕೃಷ್ಣಾ ಹಾಗೂ ಸತಾರಾದ ಕೊಯ್ನಾ ನದಿ ಸೇರಿದಂತೆ ಹಲವು ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

Indresh KC

Recent Posts

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

3 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

13 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

9 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

9 hours ago