ಮುಂಬೈ: ಮಹಾರಾಷ್ಟ್ರದಲ್ಲಿ 24 ಗಂಟೆಗಳಲ್ಲಿ 26,538 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 87,505 ದೃಢಪಟ್ಟಿವೆ.ಇದೇ ಅವಧಿಯಲ್ಲಿ 8 ಮಂದಿ ಸೋಂಕಿತರು ಮೃತಪಟ್ಟಿದ್ದು, 5,331 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ.ಮುಂಬೈ ನಗರವೊಂದರಲ್ಲೇ 15,166 ಪ್ರಕರಣಗಳು ದೃಢಪಟ್ಟಿವೆ.
ಇನ್ನು, ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 797ಕ್ಕೆ ಏರಿದ್ದು, 330 ಮಂದಿ ಚೇತರಿಸಿಕೊಂಡಿದ್ದಾರೆ.