ಮಹಾರಾಷ್ಟ್ರ

ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯಲ್ಲಿ ಎನ್ ಕೌಂಟರ್, 26 ನಕ್ಸಲರ ಬಲಿ

ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ 26 ನಕ್ಸಲರ ಬಲಿಯಾಗಿದ್ದಾರೆ. ಗಢಚಿರೋಲಿ ಪೊಲೀಸ್ ಸಿ-60  ಕಮಾಂಡೋ ಪಡೆ ಛತ್ತೀಸ್‌ ಗಢ- ಗಢಚಿರೋಲಿ ಗಡಿಯ ಕೋಟ್ಗಲ್-ಗ್ಯಾರಪತ್ತಿ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾಗ ನಕ್ಸಲರು ಭದ್ರತಾ ಪಡೆ ಮೇಲೆ ದಾಳಿ ನಡೆಸಿದ್ದು, ಆಗ ಭದ್ರತಾ ಪಡೆ ಪತ್ರಿದಾಳಿಗೆ 26 ನಕ್ಸಲರು ಬಲಿಯಾಗಿದ್ದಾರೆ.

ಎನ್‌ ಕೌಂಟರ್‌ ನಡೆದ ಸ್ಥಳದಲ್ಲಿ ಕಮಾಂಡೋಗಳು ಹಲವು ಶಸ್ತ್ರಾಸ್ತ್ರ ಮತ್ತು ಇತರ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಎನ್‌ ಕೌಂಟರ್‌ ನಲ್ಲಿ 10 ಅಧಿಕ ನಕ್ಸಲರು, 4 ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ 6.30ರಿಂದ ಗುಂಡಿನ ಚಕಮಕಿ ಆರಂಭವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಹೇಳಿದ್ದಾರೆ.

ಹತ್ಯೆಗೀಡಾದ ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ. ಉನ್ನತ ನಕ್ಸಲ್ ಮುಖಂಡನೊಬ್ಬ ಮೃತಪಟ್ಟಿರುವ ಬಗ್ಗೆ ಮೂಲಗಳು ಶಂಕೆ ವ್ಯಕ್ತಪಡಿಸಿವೆ.

Sneha Gowda

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

13 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

18 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

34 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

50 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago