ಮಹಾರಾಷ್ಟ್ರ : ಅಕ್ಟೋಬರ್ 7 ರಿಂದ ಧಾರ್ಮಿಕ ಸ್ಥಳಗಳನ್ನು ತೆರೆಯಲು ಒಪ್ಪಿಗೆ

ಮಹಾರಾಷ್ಟ್ರ :  ಕೊರೋನಾ ಎರಡನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ದೀರ್ಘ ಕಾಲದಿಂದ ಮುಚ್ಚಲ್ಪಟ್ಟಿದ ಧಾರ್ಮಿಕ ಸ್ಥಳಗಳನ್ನು ಅಕ್ಟೋಬರ್ 7 ರಿಂದ ತೆರೆಯಲು ಒಪ್ಪಿಗೆ ನೀಡಿದೆ. ಹಬ್ಬಗಳು ಆರಂಭವಾಗುತ್ತಿದ್ದು, ನವರಾತ್ರಿ ಮೊದಲು ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಕೇಂದ್ರಗಳ ಬಾಗಿಲು ತೆರೆಯಲಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ರಾಜ್ಯದ ಎಲ್ಲಾ ಧಾರ್ಮಿಕ ಸ್ಥಳಗಳು ಅಕ್ಟೋಬರ್ 7 ರಿಂದ ತೆರೆಯಲ್ಪಡುತ್ತವೆ. ಮಹಾರಾಷ್ಟ್ರ ಸರ್ಕಾರ, ಮೂರನೇ ಅಲೆಗೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಕೊರೋನಾ ಪ್ರೋಟೋಕಾಲ್ ಅನುಸರಿಸುವುದು ಕಡ್ಡಾಯವೆಂದು ಅವರು ಹೇಳಿದ್ದಾರೆ. ದೇವಾಲಯಗಳಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅಕ್ಟೋಬರ್ 4 ರಿಂದ ಶಾಲೆಗಳನ್ನು ತೆರೆಯಲು ಅನುಮತಿ ನೀಡಿದ್ದಾರೆ. ಷರತ್ತುಬದ್ಧವಾಗಿ ಶಾಲೆಗಳನ್ನು ತೆರೆಯಬೇಕೆಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಗ್ರಾಮೀಣ ಪ್ರದೇಶಗಳಲ್ಲಿ 5-12 ತರಗತಿಗೆ, ಪಟ್ಟಣಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲಿ 8-12 ತರಗತಿ ಶಾಲೆಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳನ್ನು ಕಳೆದ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿವೆ. ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನಡೆಯುತ್ತಿದೆ. ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಮಕ್ಕಳನ್ನು ಶಾಲೆಗೆ ಕಳುಹಿಸುವುದು, ಪೋಷಕರಿಗೆ ಬಿಟ್ಟಿದ್ದು ಎಂದು ಸರ್ಕಾರ ಹೇಳಿದೆ.

ಚಿತ್ರಮಂದಿರ ಓಪನ್
ಮಹಾರಾಷ್ಟ್ರ ಸರ್ಕಾರ ಅಕ್ಟೋಬರ್ 22 ರಿಂದ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್ʼಗಳನ್ನು ಪುನರಾರಂಭಿಸಲು ಅನುಮತಿ ನೀಡಿತು. ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (MAI) ಪ್ರಮುಖ ಮಲ್ಟಿಪ್ಲೆಕ್ಸ್ಗಳಾದ ಪಿವಿಆರ್ ಮತ್ತು ಐಎನ್‌ಒಎಕ್ಸ್ ನೊಂದಿಗೆ ‘ತುರ್ತು ಆಧಾರದ ಮೇಲೆ’ ರಾಜ್ಯದಲ್ಲಿ ಚಿತ್ರಮಂದಿರಗಳನ್ನ ಮತ್ತೆ ತೆರೆಯುವಂತೆ ಸರ್ಕಾರವನ್ನ ಒತ್ತಾಯಿಸಿದ ಸುಮಾರು 2 ವಾರಗಳ ನಂತ್ರ ಈ ಅನುಮತಿ ಸಿಕ್ಕಿದೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago