News Karnataka Kannada
Monday, April 29 2024
ಮಹಾರಾಷ್ಟ್ರ

ಮಹಾರಾಷ್ಟ್ರ ಜ.24 ರಿಂದ ಭೌತಿಕ ತರಗತಿಗಳು ಪುನರಾರಂಭ

School
Photo Credit : IANS

ಮುಂಬೈ: ಮಹಾರಾಷ್ಟ್ರದ ಶಾಲೆಗಳಲ್ಲಿ ಸೋಮವಾರದಿಂದ ಭೌತಿಕ ತರಗತಿಗಳನ್ನು ಪುನರಾರಂಭಿಸಲು ಸರ್ಕಾರ ನಿರ್ಧರಿಸಿದೆ.ಓಮೈಕ್ರಾನ್‌ನಿಂದಾಗಿ ಕೋವಿಡ್‌ ಉಲ್ಬಣಗೊಂಡ ಕಾರಣ ಕಳೆದ ವರ್ಷ ಡಿಸೆಂಬರ್‌ನಲ್ಲಿ 10 ಮತ್ತು 12 ನೇ ತರಗತಿಗಳನ್ನು ಹೊರತುಪಡಿಸಿ ಇತರೆ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗಿತ್ತು.

ಇದೇ 24 ರಿಂದ ರಾಜ್ಯದ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಗುರುವಾರ ಅನುಮೋದನೆ ನೀಡಿದ್ದಾರೆ.

‘ಶಾಲೆಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಮುಖಗವಸು ಧರಿಸಬೇಕು ಹಾಗೂ ಶಾಲಾ ಆಡಳಿತ ಮಂಡಳಿಯು ಕೋವಿಡ್‌-19 ಮಾರ್ಗಸೂಚಿಯನ್ನು ತಪ್ಪದೇ ‍‍ಪಾಲಿಸಬೇಕು’ ಎಂದು ಸರ್ಕಾರ ಸೂಚಿಸಿದೆ.

‘ಕೊರೊನಾ ಪ್ರಕರಣಗಳು ಕಡಿಮೆಯಿರುವ ಪ್ರದೇಶಗಳಲ್ಲಿರುವ ಶಾಲೆಗಳು, 1 ರಿಂದ 12 ನೇ ತರಗತಿ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳನ್ನು ಸೋಮವಾರದಿಂದ (ಜ.24) ಆರಂಭಿಸಬಹುದು. ರಾಜ್ಯದಲ್ಲಿ ಸುರಕ್ಷಿತವಾಗಿ ಶಾಲೆಗಳನ್ನು ಪುನರಾರಂಭಿಸಲು ನಾವು ಬದ್ಧರಾಗಿದ್ದೇವೆ’ ಎಂದು ಮಹಾರಾಷ್ಟ್ರದ ಶಾಲಾ ಶಿಕ್ಷಣ ಸಚಿವೆ ಪ್ರೊ. ವರ್ಷಾ ಗಾಯಕ್‌ವಾಡ್ ಅವರು ತಿಳಿಸಿದರು.

‘ಭೌತಿಕ ತರಗತಿಗಳಿಗೆ ಪೋಷಕರ ಅನುಮತಿ ಮುಖ್ಯವಾಗಿದೆ. ಒಂದು ವೇಳೆ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಒಳಗಾಗಿದ್ದರೆ, ಅವರನ್ನು ಶಾಲೆಗೆ ಕಳುಹಿಸದಂತೆ ಪೋಷಕರಲ್ಲಿ ಮನವಿ ಮಾಡಲಾಗಿದೆ’ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು