News Karnataka Kannada
Saturday, May 04 2024
ಮಹಾರಾಷ್ಟ್ರ

ಮಹಾರಾಷ್ಟ್ರ; ತಾಯಿಯ ಸಾವಿಗೆ ಕಾರಣವಾದ ಮಗಳ ವಾಟ್ಸಾಪ್ ಸ್ಟೇಟಸ್

Here's how to send HD photo via WhatsApp: Watch video
Photo Credit : IANS

ಮಹಾರಾಷ್ಟ್ರ : ಪಾಲ್ಘರ್‌ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಾಟ್ಸಾಪ್ ಸ್ಟೇಟಸ್ ಮಹಿಳೆಯೊಬ್ಬಳ ಹತ್ಯೆಗೆ ಕಾರಣವಾಗಿದೆ. ಮಹಿಳೆ ಮನೆಗೆ ನುಗ್ಗಿ ಆಕೆಯನ್ನು ಥಳಿಸಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಯ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.

ಮೃತ ಮಹಿಳೆಗೆ 48 ವರ್ಷವೆಂದು ಪೊಲೀಸರು ಹೇಳಿದ್ದಾರೆ. ಮಹಿಳೆಯ 20 ವರ್ಷದ ಮಗಳು ವಾಟ್ಸಾಪ್ ಸ್ಟೇಟಸ್‌ ಹಾಕಿದ್ದಳಂತೆ. ಅದ್ರಲ್ಲಿ ಆಕೆ ಸಂದೇಶ ಬರೆದಿದ್ದಳು ಎನ್ನಲಾಗಿದೆ. ಆಕೆಯ ಸ್ನೇಹಿತರ ಕುಟುಂಬದವರಿಗೆ ಇದು ಇಷ್ಟವಾಗಲಿಲ್ಲ. ತಮಗೆ ಅವಮಾನ ಮಾಡಲು ಈ ಸ್ಟೇಟಸ್ ಹಾಕಲಾಗಿದೆ ಎಂದು ಅವರು ಕೋಪಗೊಂಡಿದ್ದಾರಂತೆ.

ನಂತ್ರ ಮನೆಗೆ ನುಗ್ಗಿದ ಅವರು ಮಹಿಳೆಯನ್ನು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ಲೀಲಾವತಿ ದೇವಿ ಪ್ರಸಾದ್ ಗೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಂತೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.

ಮೃತ ಮಹಿಳೆ ಮಗಳು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಗಳ ಸ್ನೇಹಿತರ ಮನೆಯವರನ್ನು ಬಂಧಿಸಿದ್ದಾರೆ. ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಸ್ನೇಹಿತರ ಕುಟುಂಬಸ್ಥರಿಗೆ ಅವಮಾನ ಮಾಡಲು ನಾನು ಸ್ಟೇಟಸ್ ಹಾಕಿರಲಿಲ್ಲವೆಂದು ಮೃತಳ ಮಗಳು ಪೊಲೀಸ್ ಮುಂದೆ ಹೇಳಿಕೆ ನೀಡಿದ್ದಾಳೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು