News Karnataka Kannada
Monday, April 29 2024
ಮಹಾರಾಷ್ಟ್ರ

ಮಹಾರಾಷ್ಟ್ರ : ಮುಂಬೈನ ಲೋಕಲ್ ರೈಲು ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ

Railway Delhi 17 6 21 Dt 176216 1 Newsk 9508623154
Photo Credit :

ಮಹಾರಾಷ್ಟ್ರ  : ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಯುತ್ತಿದ್ದು, ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರವು ಮುಂಬೈನ ಲೋಕಲ್ ರೈಲು ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದರ ಅನುಸಾರ ಮುಂಬೈನ ಲೋಕಲ್ ರೈಲಿನಲ್ಲಿ ಪ್ರಯಾಣಿಸುವವರು ಎರಡೂ ಡೋಸ್ ಕೋವಿಡ್ ಲಸಿಕೆಗಳನ್ನು ಪಡೆದಿರಬೇಕಾದುದು ಕಡ್ಡಾಯವಾಗಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಹಲವಾರು ಕಂಪನಿಗಳಲ್ಲಿ ಈಗಾಗಲೇ ಉದ್ಯೋಗಿಗಳನ್ನು ಕಚೇರಿಗೆ ಕರೆಯಲಾಗಿದೆ. ಕಚೇರಿಯಿಂದ ಕೆಲಸ ನಿರ್ವಹಿಸುವವರು, ಕಾರ್ಮಿಕರು ಮತ್ತು ಸರ್ಕಾರಿ ನೌಕರರಿಗೆ ಮುಂಬೈ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸಲು ಸಂಪೂರ್ಣ ವ್ಯಾಕ್ಸಿನೇಷನ್ ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಕೋವಿಡ್ -19 ಲಸಿಕೆಯ ಎರಡೂ ಡೋಸ್‌ಗಳನ್ನು ಹಾಕಿಸಿಕೊಂಡ ಹಾಗೂ ಎರಡನೇ ಡೋಸ್ ಹಾಕಿಸಿಕೊಂಡು 14 ದಿನಗಳು ಕಳೆದುಹೋದ ಜನರನ್ನು ಸಂಪೂರ್ಣ ಲಸಿಕೆ ಹಾಕಿಸಿಕೊಂಡ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ ಎಂದು ಮಾರ್ಗಸೂಚಿಯ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಪ್ರಸ್ತುತ, ಕೇಂದ್ರ ರೈಲ್ವೇ ಮತ್ತು ಪಶ್ಚಿಮ ರೈಲ್ವೇ ಜನಸಂದಣಿಯನ್ನು ಕಡಿಮೆ ಮಾಡುವ ಸಲುವಾಗಿ ದೈನಂದಿನ ಟಿಕೆಟ್‌ಗಳ ಬದಲಿಗೆ ಲಸಿಕೆ ಹಾಕಿದ ಪ್ರಯಾಣಿಕರಿಗೆ ಮಾತ್ರ ಮಾಸಿಕ ಪಾಸ್‌ಗಳನ್ನು ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು