ಮಹಾರಾಷ್ಟ್ರ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರವು ಆದೇಶ ಹೊರಡಿಸಿದೆ. ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತು ಮಹಾರಾಷ್ಟ್ರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಪ್ರದೀಪ್ ವ್ಯಾಸ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು ರೈಲುಗಳು, ಬಸ್ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳು ಸೇರಿದಂತೆ ಎಲ್ಲಾ ಮುಚ್ಚಿದ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸುವಂತೆ ಸೂಚಿಸಿದ್ದಾರೆ.