ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 10 ರೋಗಿಗಳು ಮೃತಪಟ್ಟಿದ್ದಾರೆ.
ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಾರ್ಡ್ ನಲ್ಲಿ 17 ರೋಗಿಗಳಿದ್ದರು. ಅವರಲ್ಲಿ 10 ಮಂದಿ ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಉಳಿದ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಭೋಸ್ಲೆ ತಿಳಿಸಿದ್ದಾರೆ.
ಈವರೆಗೂ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ತಿಳಿದುಬಂದಿಲ್ಲ. ಪ್ರಾರ್ಥಮಿಕ ವರದಿಯ ಅನುಸಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ ಎನ್ನಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದರು.