ಮಹಾರಾಷ್ಟ್ರದ ಗೃಹ ಸಚಿವ ದಿಲಿಪ್ ವಾಲ್ಸೆ ಪಾಟೀಲ್ ಗೆ ಮತ್ತೊಮ್ಮೆ ಕೋವಿಡ್ ಸೋಂಕು ದೃಢಪಟ್ಟಿದೆ. ಎರಡೂ ಡೋಸ್ ಲಸಿಕೆ ಪಡೆದಿರುವ ದಿಲೀಪ್ ಅವರಿಗೆ ಒಂದೇ ವರ್ಷದಲ್ಲಿ ಎರಡು ಸಲ ಕೋವಿಡ್ ಸೋಂಕು ದೃಢ ಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಕೋವಿಡ್ ಸೋಂಕಿನ ಕೆಲವು ಲಕ್ಷಣಗಳು ಕಾಣಿಸಿದ ತಕ್ಷಣ ನಾನು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದೆ. ರಿಪೋರ್ಟ್ ಪಾಸಿಟಿವ್ ಬಂದಿದೆ. ನನ್ನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ” ಎಂದಿದ್ದಾರೆ.
“ವೈದ್ಯರ ಸಲಹೆಗಳನ್ನು ಅನುಸರಿಸುತ್ತಿದ್ದೇನೆ. ಇತ್ತೀಚೆಗೆ ನಾಗ್ಪುರ ಮತ್ತು ಅಮರಾವತಿ ಪ್ರವಾಸ ಮತ್ತು ಇತರ ಕಾರ್ಯಕ್ರಮಗಳ ಸಮಯದಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.