ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿವೆ. ಗುರುವಾರದಂದು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.
ಶುಕ್ರವಾರ ಸಂಜೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲೇ ಅತಿ ಹೆಚ್ಚು 20,971 ಪ್ರಕರಣಗಳು ವರದಿಯಾಗಿವೆ.ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 8,74,780ಕ್ಕೆ ಏರಿಕೆಯಾಗಿದೆ.
ಈ ಪೈಕಿ ಶೇ 84 ಮಂದಿಯಲ್ಲಿ ರೋಗ ಲಕ್ಷಣ ಕಂಡುಬಂದಿಲ್ಲ ಎಂಬುದು ಗಮನಾರ್ಹವೆನಿಸುತ್ತದೆ.
ಮುಂಬೈನಲ್ಲಿ ಸಂಪೂರ್ಣ ಲಾಕ್ಡೌನ್ ಹೇರಲಾಗುವುದೇ ಎಂಬುದರ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ರಾಜೇಶ್ ತೋಪೆ ತಿಳಿಸಿದ್ದಾರೆ.