ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಶನಿವಾರ ಒಂದೇ ದಿನ 6,347 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 5,712 ಮಂದಿ ಸೋಂಕಿತರು ರೋಗ ಲಕ್ಷಣ ಹೊಂದಿಲ್ಲ, ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,334ಕ್ಕೆ ಏರಿಕೆಯಾಗಿದೆ ಎಂದು ಮುಂಬೈ ನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಶುಕ್ರವಾರ ಕೂಡ ನಗರದಲ್ಲಿ 5,631 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.451 ಸೋಂಕಿತರು ಚೇತರಿಸಿಕೊಂಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಶನಿವಾರ 2,761 ಪ್ರಕರಣಗಳು ದೃಢಪಟ್ಟಿವೆ. ಇದು ನಿನ್ನೆಯ ಸೋಂಕು ಪ್ರಕರಣಗಳಿಗೆ ಹೋಲಿಸಿದರೆ ಶೇ 51ರಷ್ಟು ಹೆಚ್ಚಾಗಿದೆ. ಪಾಸಿಟಿವಿಟಿ ದರ ಶೇ 3.64ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಸದ್ಯ 6,360 ಸಕ್ರಿಯ ಪ್ರಕರಣಗಳಿವೆ.