News Karnataka Kannada
Sunday, April 28 2024
ಮಹಾರಾಷ್ಟ್ರ

ಮುಂಬೈ ಗ್ಯಾಂಗ್ ರೇಪ್ ಪ್ರಕರಣ, ಇಬ್ಬರು ಅಪ್ರಾಪ್ತರ ಬಂಧನ

Harrasment
Photo Credit :

ಮುಂಬೈ: ಜನವರಿ 21ರಂದು ನಡೆದ ಮಹಿಳೆಯೊಬ್ಬರ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ.ಜನವರಿ 21, 2022 ಶನಿವಾರ ಮುಂಜಾನೆ 4.30 ರ ಸುಮಾರಿಗೆ ಮುಂಬೈನಲ್ಲಿ ಮಹಿಳೆಯೊಬ್ಬರ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತ ಮಹಿಳೆ ಕೇಟರಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು.

ಕೃತ್ಯದಲ್ಲಿ ನಾಲ್ವರು ಭಾಗಿಯಾಗಿದ್ದರೆಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. ಸಧ್ಯ ಇಬ್ಬರನ್ನ ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರೆಸಿದ್ದಾರೆ.

ಕೆಲಸ ಮುಗಿಸಿಕೊಂಡು ಮಹಿಳೆ ಮನೆಗೆ ತೆರಳುತ್ತಿದ್ದಾಗ ಆಕೆಗೆ ಪರಿಚಯವಿದ್ದ ಆರೋಪಿಯೊಬ್ಬ ಆಕೆಯನ್ನ ತಡೆದಿದ್ದಾನೆ. ಯಾಕೆ ಇಷ್ಟು ತಡವಾಗಿ ಮನೆಗೆ ಹಿಂದಿರುಗುತ್ತಿದ್ದಿಯಾ ಎಂದು ವಿಚಾರಿಸಿದ್ದಾನೆ. ಇದೇ ವೇಳೆ ಮತ್ತೊಬ್ಬ ಆರೋಪಿ ಆಕೆಯನ್ನು ಜೊತೆಗೆ ಬರುವೆಯಾ ಎಂದು ಪ್ರಶ್ನಿಸಿ, ಬಲವಂತವಾಗಿ ಕೋಣೆಗೆ ಎಳೆದೊಯ್ದು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ.

ಮಹಿಳೆಯು ಜೋರಾಗಿ ಕಿರುಚಿ ಜನರನ್ನ ಎಚ್ಚರಿಸಲು ಪ್ರಯತ್ನಿಸಿದಾಗ ಇನ್ನೊಬ್ಬನು ಇವರೊಂದಿಗೆ ಸೇರಿಕೊಂಡು,
ಅವಳ ಬಾಯಿಯನ್ನು ಬಿಗಿದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯ ಎಸಗಿದ ಬಳಿಕ ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯ ನಂತರ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಟೆಕ್ನಿಕಲ್ ಇಂಟಲಿಜೆನ್ಸ್ ಮತ್ತು ಸಂತ್ರಸ್ತೆ ನೀಡಿದ ವಿವರಣೆಯನ್ನು ಬಳಸಿಕೊಂಡು ಎಲ್ಲಾ ನಾಲ್ವರು ಆರೋಪಿಗಳ ಐಡೆಂಟಿಟಿ ಕಂಡುಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆರೋಪಿಗಳು ಕಸ್ಟಡಿಯಲ್ಲಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿದ್ದು, ತಲೆಮರೆಸಿಕೊಂಡಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು