ಮುಂಬೈ: ಸ್ನೇಹಿತೆ ಕರೆ ಸ್ವೀಕರಿಸದ ಕಾರಣ ಯುವಕ ಆತ್ಮಹತ್ಯೆ

ಮುಂಬೈ : ಮುಂಬೈನ ಡಿಯೋನಾರ್ ಪ್ರದೇಶದಲ್ಲಿ ತನ್ನ ಸ್ನೇಹಿತೆ ಕರೆ ಸ್ವೀಕರಿಸದ ಕಾರಣ 24 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನನ್ನ ಮಾನವ್ ಲಾಲ್ವಾನಿ ಎಂದು ಗುರುತಿಸಲಾಗಿದೆ.

ಮೃತ ಯುವಕ ತಡರಾತ್ರಿವರೆಗೂ  ಆತನ ಸ್ನೇಹಿತ – ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂದು ಟ್ರೋಂಬೇ ಪೊಲೀಸ್ ಠಾಣೆ ಹಿರಿಯ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಾರ್ಟಿ ಮುಗಿಸಿ ಮನೆಗೆ ಬಂದ ಯುವಕ, ತನ್ನ ಸ್ನೇಹಿತೆಗೆ ಕರೆ ಮಾಡಿದ್ದಾನೆ. ಆದ್ರೆ, ಯುವತಿ ಆತನ ಕರೆಯನ್ನ ಸ್ವೀಕರಿಸಿಲ್ಲ. ಪಟ್ಟು ಬಿಡದ ಯುವಕ ಮತ್ತೆ ಮತ್ತೆ ಕರೆ ಮಾಡಿದ್ದಾನೆ. ಆದ್ರೆ, ಯುವತಿ ಕರೆಗೆ ಪ್ರತಿಕ್ರಿಯಿಸದ ಕಾರಣ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ’ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು.

ಮಂಗಳವಾರ ಬೆಳಿಗ್ಗೆ ಯುವಕ ಟೆರೇಸ್ʼನಲ್ಲಿ ನೇತಾಡುತ್ತಿರುವುದನ್ನ ಅವನ ಪೋಷಕರು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಸಂತ್ರಸ್ತನ ದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನು ಹೆಚ್ಚಿನ ತನಿಖೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣ ದಾಖಲಿಸಿ ಯುವತಿಯ ಹೇಳಿಕೆ ದಾಖಲಿಸಲಾಗಿದೆ.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

16 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

17 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

38 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

48 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

50 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

1 hour ago