News Karnataka Kannada
Friday, May 03 2024
ಮಹಾರಾಷ್ಟ್ರ

ಮುಂಬೈ: ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ

Untitled 1
Photo Credit :

ಮುಂಬೈ: ಹೆಲ್ಮೆಟ್ ರಹಿತ ಸವಾರರಿಗೆ ಮುಂಬೈ ಪೊಲೀಸರು ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ. ಇನ್ಮುಂದೆ ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡಿದವರಿಗೆ 500 ರೂ. ದಂಡ ಮತ್ತು 3 ತಿಂಗಳ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗುತ್ತದೆ.

ದ್ವಿಚಕ್ರ ವಾಹನವನ್ನು ಓಡಿಸುವ ಸವಾರರು ಮತ್ತೆ ಅವರ ಹಿಂಬದಿ ಕುಳಿತವರೂ ಕೂಡ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಈ ನಿಯಮವನ್ನು ಉಲ್ಲಂಘಿಸುವ ಹಿಂಬದಿ ಸವಾರರಿಗೂ ಸಹ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಈ ಬಗ್ಗೆ ಮುಂಬೈ ಪೊಲೀಸರು ಮೈಕ್ರೋಬ್ಲಾಗಿಂಗ್ ಸೈಟ್‌ನಲ್ಲಿ ಸುತ್ತೋಲೆಯನ್ನು ಹಂಚಿಕೊಂಡಿದ್ದಾರೆ. ಸುತ್ತೋಲೆಯ ಪ್ರಕಾರ, ಸೈಕ್ಲಿಸ್ಟ್‌ಗಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗುವುದು ಎನ್ನಲಾಗಿದೆ.

ಕಳೆದ ತಿಂಗಳು ಹೆಲ್ಮೆಟ್ ರಹಿತ ಸವಾರರ ವಿರುದ್ಧ ಸಂಚಾರ ಪೊಲೀಸರು 75,000 ಚಲನ್‌ಗಳನ್ನು ದಾಖಲಿಸಿದ್ದಾರೆ ಎಂದು ಡಿಸಿಪಿ (ಟ್ರಾಫಿಕ್) ರಾಜ್ ತಿಲಕ್ ರೋಷನ್ ಬಹಿರಂಗಪಡಿಸಿದ್ದಾರೆ.

ಹೆಲ್ಮೆಟ್ ಇಲ್ಲದೆ ಸವಾರಿ ಮಾಡುವವರಿಗೆ 500 ರೂ. ದಂಡ ವಿಧಿಸಲಾಗುತ್ತದೆ. ಅಲ್ಲದೆ ಅವರ ಪರವಾನಗಿಯನ್ನು 3 ತಿಂಗಳವರೆಗೆ ಅಮಾನತುಗೊಳಿಸಲಾಗುತ್ತದೆ. ಅಂಥವರನ್ನು ಹತ್ತಿರದ ಟ್ರಾಫಿಕ್ ಚೌಕಿಗೆ ಕಳುಹಿಸಲಾಗುತ್ತದೆ. ಅಲ್ಲಿ ಅವರು ರಕ್ಷಣಾತ್ಮಕ ಚಾಲನೆ ಮತ್ತು ಸಂಚಾರ ನಿಯಮಗಳ ಕುರಿತು 2 ಗಂಟೆಗಳ ವಿಡಿಯೋಗಳನ್ನು ವೀಕ್ಷಿಸಬೇಕಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು