News Karnataka Kannada
Monday, April 29 2024
ಮಹಾರಾಷ್ಟ್ರ

ಮುಸ್ಲಿಂ ಮಹಿಳೆಯರ ವಿರುದ್ಧ ಅಶ್ಲೀಲ ಕಮೆಂಟ್‌: ಮೂವರು ಬಂಧನ

UP teacher sent to jail for sexually assaulting 15 schoolgirls, 2 others booked
Photo Credit : IANS

ಮುಂಬೈ : ಕ್ಲಬ್‌ ಹೌಸ್ ಆಯಪ್‌ ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅಶ್ಲೀಲ ಕಮೆಂಟ್‌ಗಳನ್ನು ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಹರ್ಯಾಣದ ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಮುಂಬೈ ಅಪರಾಧ ವಿಭಾಗದ ಸೈಬರ್ ಪೊಲೀಸ್ ಠಾಣೆಯ ಸಿಬ್ಬಂದಿ ಗುರುವಾರ ತಡರಾತ್ರಿ ಮೂವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದರು. ಇಬ್ಬರು ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಇಂದು ಮುಂಜಾನೆ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ ಶಿವಸೇನೆಯ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚತುರ್ವೇದಿ, ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವ ನಗರ ಪೊಲೀಸರನ್ನು ಶ್ಲಾಘಿಸಿದ್ದಾರೆ.

ಬುಧವಾರ, ದಿಲ್ಲಿ ಪೊಲೀಸರು ಕ್ಲಬ್‌ ಹೌಸ್ ಅಪ್ಲಿಕೇಶನ್ ಮತ್ತು ಸರ್ಚ್ ಇಂಜಿನ್ ಗೂಗಲ್‌ಗೆ ಪತ್ರ ಬರೆದಿದ್ದಾರೆ. “ಮುಸ್ಲಿಂ ಮಹಿಳೆಯರ ವಿರುದ್ಧ ಅಶ್ಲೀಲ ಕಮೆಂಟ್‌ಗಳನ್ನು ಮಾಡಲಾಗಿದೆ” ಎಂಬ ಆಪಾದಿತ ಆಡಿಯೊ ಗ್ರೂಪ್ ಚಾಟ್‌ನ ಆಯೋಜಕರ ಕುರಿತು ವಿವರಗಳನ್ನು ಕೋರಿದ್ದಾರೆ. ತನಿಖೆಯ ಭಾಗವಾಗಿ ಎರಡೂ ಸಮುದಾಯಗಳ ಪುರುಷರು ಮತ್ತು ಮಹಿಳೆಯರನ್ನು ಒಳಗೊಂಡ ಗ್ರೂಪ್ ಆಡಿಯೊ ಚಾಟ್‌ನ ಕೆಲವು ಸದಸ್ಯರನ್ನು ಪೊಲೀಸರು ಗುರುತಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಂಬೈ ಮೂಲದ ಸಂಸ್ಥೆಯು ಕ್ಲಬ್‌ ಹೌಸ್ ಆಯಪ್‌ ಗೆ ಸಂಬಂಧಿಸಿದಂತೆ ಬುಧವಾರ ನಗರ ಪೊಲೀಸರಿಗೆ ದೂರು ನೀಡಿದ್ದು, ಆಯಪ್ ನಿಷ್ಕ್ರಿಯಗೊಳಿಸುವಂತೆ ಹಾಗೂ ಪ್ರಕರಣವನ್ನು ದಾಖಲಿಸುವಂತೆ ಕೋರಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು