ಮಹಾರಾಷ್ಟ್ರ

ಮೂರು ಡೋಸ್ ಫೈಜರ್ ಲಸಿಕೆ ಪಡೆದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢ!

ಮುಂಬೈ: ಅಮೆರಿಕದ ನ್ಯೂಯಾರ್ಕ್‌ ನಿಂದ ಹಿಂದಿರುಗಿದ 29 ವರ್ಷದ ವ್ಯಕ್ತಿಗೆ ಶುಕ್ರವಾರ ಮುಂಬೈನಲ್ಲಿ ಒಮಿಕ್ರಾನ್ ರೂಪಾಂತರಿ ಸೋಂಕು ತಗುಲಿರುವುದು ಧೃಢವಾಗಿದೆ. “ಸೋಂಕಿತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಿಗೆ ಯಾವುದೇ ರೋಗಲಕ್ಷಣಗಳಿಲ್ಲ”  ಈ ಬಗ್ಗೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ನವೆಂಬರ್ 9 ರಂದು ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಅವರು ಕೋವಿಡ್ -19 ಪಾಸಿಟಿವ್ ಪತ್ತೆಯಾಗಿತ್ತು. ನಂತರ ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿತ್ತು. ಅವರ ಇಬ್ಬರು ನಿಕಟ ಸಂಪರ್ಕಿತರ ಕೋವಿಡ್ ಪರೀಕ್ಷೆ ನೆಗಟಿವ್ ವರದಿಯಾಗಿದೆ ಎಂದು ಬಿಎಂಸಿ ತಿಳಿಸಿದೆ.

ಒಮಿಕ್ರಾನ್ ಸೋಂಕಿತ ವ್ಯಕ್ತಿಗೆ ಯಾವುದೇ ರೋಗಲಕ್ಷಣಗಳಿಲ್ಲ. ಈತ ಫೈಜರ್ ಲಸಿಕೆಯ ಮೂರು ಡೋಸ್ ತೆಗೆದುಕೊಂಡಿದ್ದಾನೆ ಎಂದು ಬಿಎಂಸಿ ಹೇಳಿದೆ.

 

ಈ ಪ್ರಕರಣದೊಂದಿಗೆ ಮುಂಬೈನ ಒಮಿಕ್ರಾನ್ ರೋಗಿಗಳ ಸಂಖ್ಯೆಯನ್ನು 15 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಐವರು ಮುಂಬೈನ ಹೊರಗಿನವರು ಸೇರಿದ್ದಾರೆ. ಆದರೆ ಈ ಪೈಕಿ 13 ರೋಗಿಗಳು ಈಗಾಗಲೇ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

Swathi MG

Recent Posts

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

9 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

28 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

43 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

1 hour ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

1 hour ago