ಮಹಾರಾಷ್ಟ್ರ : ಥಾಣೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ವೆಹ್ಲೋಲಿ ಗ್ರಾಮದ ಜಮೀನಿನಲ್ಲಿ ಹಕ್ಕಿ ಜ್ವರದ ಭಯದ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳಲ್ಲಿ ಥಾಣೆಯ ಬಾಧಿತ ಕೋಳಿ ಫಾರ್ಮ್ ನ ಕಿಲೋಮೀಟರ್ ವ್ಯಾಪ್ತಿಯಲ್ಲಿ ಬೀಳುವ ಸುಮಾರು 25,000 ಕೋಳಿಗಳನ್ನು ಸಾಯಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.
ಥಾಣೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ವೆಹ್ಲೋಲಿ ಗ್ರಾಮದ ಜಮೀನಿನಲ್ಲಿ ಸುಮಾರು 100 ಕೋಳಿಗಳು ಇದ್ದಕ್ಕಿದ್ದಂತೆ ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಎನ್ ಐ ಇನ್ ಪುಟ್ ಪ್ರಕಾರ, ಥಾಣೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಕಲೆಕ್ಟರ್ ರಾಜೇಶ್ ಜೆ ನರ್ವೇಕರ್ ಅವರು, ಸೋಂಕನ್ನು ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾ ಪಶುಸಂಗೋಪನಾ ಇಲಾಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದು, ಸತ್ತ ಪಕ್ಷಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆ ಮೂಲದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.