₹ 50 ಕದ್ದ ಮಗನನ್ನು ಹೊಡೆದು ಕೊಂದ ತಂದೆ!

 ಮಹಾರಾಷ್ಟ್ರ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿನ ಕಲ್ವಾ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮನೆಯಿಂದ ₹50 ಕದ್ದ ಎಂಬ ಕಾರಣದಿಂದ ತನ್ನ ಸ್ವಂತ ಮಗನನ್ನೇ ಥಳಿಸಿ ಕೊಂದಿದ್ದು ಆತನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮನೆಯಿಂದ ₹50 ಕದ್ದ ಎಂಬ ಕಾರಣದಿಂದ ತಂದೆಯೇ ಹೊಡೆದಿರುವುದಾಗಿ ಆ ಸಮಯದಲ್ಲಿ ಅಲ್ಲಿದ್ದ ಬಾಲಕನ ಅಕ್ಕ ಪೊಲೀಸರಿಗೆ ಮಾಹಿತಿ ನೀಡಿದರು’ ಎಂದು ಪೊಲೀಸರು ವಿವರಿಸಿದರು.

ವಘೋಬಾ ನಗರದ ಸ್ಲಂ ಕಾಲೋನಿಯಲ್ಲಿ ಗುರುವಾರ ಸಂಜೆ ಸಂದೀಪ್‌ ಬಬ್ಲು ಓಂಪ್ರಕಾಶ್‌ ಪ್ರಜಾಪತಿ (41) ಎಂಬ ವ್ಯಕ್ತಿ ತನ್ನ 10 ವರ್ಷದ ಮಗನನ್ನು ಚೆನ್ನಾಗಿ ಥಳಿಸಿದ್ದರಿಂದ ಬಾಲಕ ನಿತ್ರಾಣವಾಗಿ ನೆಲದ ಮೇಲೆ ಬಿದ್ದಿದ್ದನು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

‘ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸ್‌ ತಂಡವೊಂದು ಬಾಲಕನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆ ವೇಳೆಗಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಪ್ರಜಾಪತಿ ವಿರುದ್ಧ ಕೊಲೆಯ ಪ್ರಕರಣ ದಾಖಲಿಸಲಾಗಿದೆ. ಮೃತ ಬಾಲಕನ ತಾಯಿಯ ವಿಚಾರಣೆ ನಡೆಯುತ್ತಿದೆ ಎಂದು ಕಲ್ವಾ ಪೊಲೀಸ್‌ ಠಾಣೆಯ ಅಧಿಕಾರಿ ಹೇಳಿದರು.

Swathi MG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago