News Karnataka Kannada
Wednesday, May 08 2024
ಮಹಾರಾಷ್ಟ್ರ

21 ವರ್ಷದ ಯುವತಿಯೋರ್ವಳ ಮೇಲೆ ಮೂವರು ಕಾಮುಕರಿಂದ ಅತ್ಯಾಚಾರ

Shocking incident in Koppal: Woman accused of gang-rape
Photo Credit :

ಮಹಾರಾಷ್ಟ್ರ: 21 ವರ್ಷದ ಯುವತಿಯೋರ್ವಳ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಅಂಬರನಾಥ್​​ನಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಭಾನುವಾರ ಮಧ್ಯಾಹ್ನ ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಂಬರ್​ನಾಥ್ ಶಾಪ್​​ನಲ್ಲಿ ಕೆಲಸ ಮಾಡ್ತಿದ್ದ ಹನುಮಾನ್ ಹಾಗೂ ಆತನ ಸ್ನೇಹಿತರಾದ ವಿಶ್ವಾಸ್​ ಹಾಗೂ ಜಾವೀದ್​ ಮದ್ಯಪಾನ ಮಾಡಲು GIP ಡ್ಯಾಮ್​ಗೆ ತೆರಳಿದ್ದಾರೆ. ಈ ವೇಳೆ ತನ್ನ ಸ್ನೇಹಿತೆಗೆ ಹನುಮಾನ್​ ಫೋನ್​ ಮಾಡಿದ್ದು, ತಾವಿರುವ ಸ್ಥಳಕ್ಕೆ ಬರುವಂತೆ ತಿಳಿಸಿದ್ದಾನೆ.

ಯುವತಿ ಅಲ್ಲಿಗೆ ಬರುತ್ತಿದ್ದಂತೆ ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದ್ದು, ತದನಂತರ ಮದ್ಯದ ಬಾಟಲಿಯಿಂದ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ. ಈ ಘಟನೆ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿ, ಸ್ಥಳದಿಂದ ಪರಾರಿಯಾಗಿದ್ದಾರೆ.

ಅಲ್ಲಿಂದ ವಾಪಸ್​ ಆಗಿರುವ ಯುವತಿ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾಳೆ. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಖಾಕಿ ಪಡೆ ಮೂವರು ಆರೋಪಿಗಳನ್ನು ಬಂಧಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು