ಪುಣೆ: ಸಲಿಂಗ ಸಂಗಾತಿ 21 ವರ್ಷದ ವಿದ್ಯಾರ್ಥಿಯನ್ನು ಚೂರಿ ಇಂದ ತಿವಿದು ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆ ಸಿಟಿ ಪೊಲೀಸ್ ಅಧಿಕಾರಿಗಳ ಪ್ರಕಾರ, ಆರೋಪಿ ಬ್ಯಾಚುಲರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (ಬಿಬಿಎ) ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಮತ್ತು ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿ ಮೇಲೆ ವಘೋಲಿಯ ಬಾಕೋರಿ ರಸ್ತೆಯಲ್ಲಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ.
ದಾಳಿಯ ನಂತರ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ, ಅಲ್ಲಿ ರಸ್ತೆಯಲ್ಲಿ ಹೋಗುತ್ತಿದವರು ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ. ಪ್ರಾಥಮಿಕ ತನಿಖೆಯೊಂದಿಗೆ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.